ತುಮಕೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಬಾಣಂತಿ ಹಾಗೂ ನವಜಾತ ಶಿಶುಗಳು ಸಾವನ್ನಪ್ಪಿರುವ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಜಟಾಪಟಿಗೆ ಎಡೆಮಾಡಿಕೊಟ್ಟಿದೆ. ಈ ಘಟನೆಯು ಬಿಜೆಪಿ ಸರ್ಕಾರಕ್ಕೆ ಮುಜುಗರದ ಸನ್ನಿವೇಶ ಸೃಷ್ಟಿಸಿದೆ.
ಈ ಘಟನೆ ಬೆನ್ನಲ್ಲೇ ಬಿಜೆಪಿ ಸರ್ಕಾರದ ವಿರುದ್ದ ಸಾರ್ವಜನಿಕರ ಆಕ್ರೋಶ ಸ್ಫೋಟಗೊಂಡಿದ್ದು, ತಕ್ಷಣ ಎಚ್ಚೆತ್ತ ಆರೋಗ್ಯ ಇಲಾಖೆಯು ತಪ್ಪಿತಸ್ಥ ವೈದ್ಯರ ಹಾಗೂ ಆಸ್ಪತ್ರೆ ಸಿಬ್ಬಂದಿ ವಿರುದ್ದ ಕ್ರಮಕ್ಕೆ ಮುಂದಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವ ಸುಧಾಕರ್, ತಪ್ಪಿತಸ್ಥರನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ ತಮ್ಮ ರಾಜೀನಾಮೆಗೆ ಆಗ್ರಹಿಸುತ್ತಿರುವ ಪ್ರತಿಪಕ್ಷ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿರುವ ಸಚಿವ ಸುಧಾಕರ್, ಸಾವಿನ ಮನೆಯಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ತಮ್ಮ ಕೀಳು ಮಟ್ಟದ ರಾಜಕಾರಣ ರಾಜ್ಯದ ಜನತೆಗೆ ಹೊಸತೇನಲ್ಲ ಎಂದಿದ್ದಾರೆ. ಟ್ವೀಟ್ ಮಾಟಿರುವ ಅವರು, 2015ರಲ್ಲಿ ರಾಜ್ಯದಲ್ಲಿ 5,109 ನವಜಾತ ಶಿಶುಗಳು, 519 ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂದು ಅಂಕಿ-ಅಂಶ ಹೇಳುತ್ತದೆ. ಆಗ ನೀವು ನಿಮ್ಮ ಆರೋಗ್ಯ ಸಚಿವರ ರಾಜೇನಾಮೆ ಪಡೆದುಕೊಂಡಿರಾ? ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ.
ಮಾನ್ಯ @siddaramaiah ನವರೆ,
ಸಾವಿನ ಮನೆಯಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ತಮ್ಮ ಕೀಳು ಮಟ್ಟದ ರಾಜಕಾರಣ ರಾಜ್ಯದ ಜನತೆಗೆ ಹೊಸತೇನಲ್ಲ.
2015ರಲ್ಲಿ ರಾಜ್ಯದಲ್ಲಿ 5,109 ನವಜಾತ ಶಿಶುಗಳು, 519 ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂದು ಅಂಕಿ-ಅಂಶ ಹೇಳುತ್ತದೆ. ಆಗ ನೀವು ನಿಮ್ಮ ಆರೋಗ್ಯ ಸಚಿವರ ರಾಜೇನಾಮೆ ಪಡೆದುಕೊಂಡಿರಾ?
1/7
— Dr Sudhakar K (Modi ka Parivar) (@DrSudhakar_) November 4, 2022
ತಾವು ಮುಖ್ಯಮಂತ್ರಿಗಳಾಗಿದ್ದಾಗ ತಮ್ಮ ತವರು ಜಿಲ್ಲೆ ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಒಂದೇ ತಿಂಗಳಿನಲ್ಲಿ 6 ಬಾಣಂತಿ ಮಹಿಳೆಯರು ಜೀವ ಕಳೆದುಕೊಂಡಾಗ ಅಥವಾ ಕೋಲಾರದಲ್ಲಿ 90 ಹಸುಗೂಸುಗಳ ಮರಣದ ಪ್ರಕರಣ ಬೆಳಕಿಗೆ ಬಂದಾಗ ತಾವು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟಿದ್ದೀರ ಎಂದು ಸಿದ್ದರಾಮಯ್ಯರತ್ತ ಪ್ರಶ್ನೆಗಳ ಅಸ್ತ್ರ ಪ್ರಯೋಗಿಸಿರುವ ಸುಧಾಕರ್, 2017ರಲ್ಲಿ ತಮ್ಮ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರ ಒಣ ಪ್ರತಿಷ್ಠೆಗೋಸ್ಕರ ವೈದ್ಯರನ್ನು 2 ವಾರ ಮುಷ್ಕರಕ್ಕೆ ದೂಡಿ ರಾಜ್ಯಾದ್ಯಂತ ಆಸ್ಪತ್ರೆಗಳು,ಕ್ಲಿನಿಕ್ ಗಳು ಮುಚ್ಚಿ 65ಕ್ಕೂ ಹೆಚ್ಚು ಜನ ಚಿಕಿತ್ಸೆ ಸಿಗದೆ ಸತ್ತಾಗ ಆತ್ಮಸಾಕ್ಷಿ ಇಲ್ಲದೆ ಅವರ ಸಾವಿಗೆ ಸಾಕ್ಷಿ ಕೇಳಿದ ತಾವು ಯಾವ ನೈತಿಕತೆ ಇಟ್ಟುಕೊಂಡು ನನ್ನ ರಾಜೀನಾಮೆ ಕೇಳುತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.
2017ರಲ್ಲಿ ತಮ್ಮ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರ ಒಣ ಪ್ರತಿಷ್ಠೆಗೋಸ್ಕರ ವೈದ್ಯರನ್ನು 2ವಾರ ಮುಷ್ಕರಕ್ಕೆ ದೂಡಿ ರಾಜ್ಯಾದ್ಯಂತ ಆಸ್ಪತ್ರೆಗಳು,ಕ್ಲಿನಿಕ್ ಗಳು ಮುಚ್ಚಿ 65ಕ್ಕೂ ಹೆಚ್ಚು ಜನ ಚಿಕಿತ್ಸೆ ಸಿಗದೆ ಸತ್ತಾಗ ಆತ್ಮಸಾಕ್ಷಿ ಇಲ್ಲದೆ ಅವರ ಸಾವಿಗೆ ಸಾಕ್ಷಿ ಕೇಳಿದ ತಾವು ಯಾವ ನೈತಿಕತೆ ಇಟ್ಟುಕೊಂಡು ನನ್ನ ರಾಜೀನಾಮೆ ಕೇಳುತ್ತಿದ್ದೀರಿ?3/7
— Dr Sudhakar K (Modi ka Parivar) (@DrSudhakar_) November 4, 2022
ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರ ಇದ್ದಾಗ ಸುಲುವಾಡಿ ಗ್ರಾಮದಲ್ಲಿ ವಿಷಪೂರಿತ ಪ್ರಸಾದ ಸ್ವೀಕರಿಸಿ 15 ಮಂದಿ ಮೃತಪಟ್ಟಾಗ ಅವರ ಆರೋಗ್ಯ ಸಚಿವರಿಗೆ 2 ದಿನವಾದರೂ ಅದರ ಮಾಹಿತಿಯೇ ಇರಲಿಲ್ಲ ಎಂದು ಆರೋಪಿಸಿದ ಸುಧಾಕರ್, ಮೇ 2019ರಲ್ಲಿ ಕೆಜಿಎಫ್ ನಲ್ಲಿ ಸಮೀನಾ ಎಂಬ ಗರ್ಭಿಣಿ ಮಹಿಳೆ ವೈದ್ಯರ ನಿರ್ಲಕ್ಷ್ಯದಿಂದ ತನ್ನ ಮಗುವನ್ನು ಕಳೆದುಕೊಂಡಾಗ ರಾಜೀನಾಮೆ ಕೊಟ್ಟರೆ? ಎಂದು ಪ್ರಶ್ನಿಸಿದ್ದಾರೆ.





















































