ಬೆಂಗಳೂರು: ನಟಿ, ಸಂಸದೆ ಸುಮಲತಾ ಅಂಬರೀಶ್ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಯಡಿಯೂರಪ್ಪ ಹಾಗೂ ಹಿರಿಯ ನಾಯಕರ ಸಮ್ಮುಖದಲ್ಲಿ ಸುಮಲತಾ ಅವರು ಬಿಜೆಪಿಗೆ ಸೇರ್ಪಡೆಯಾದರು. ಇದೇ ವೇಳೆ, ಕ್ರಿಕೆಟಿಗ ದೊಡ್ಡ ಗಣೇಶ ಮತ್ತು ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಅವರೂ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡರು.
Live : ಪಕ್ಷ ಸೇರ್ಪಡೆ ಕಾರ್ಯಕ್ರಮ
ಸ್ಥಳ : ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ#JoinBJP https://t.co/j6h8NB6g1W
— BJP Karnataka (@BJP4Karnataka) April 5, 2024
ಈ ನಡುವೆ, ತಮ್ಮ ನಡೆಯನ್ನು ಸ್ಪಷ್ಟ ಪಡಿಸಿದ ಸುಮಲತಾ ಅಂಬರೀಶ್, ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದರು