ದೆಹಲಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ. ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಅವರ ವಿರುದ್ದದ ತನಿಖೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಡಿನೋಟಿಫಿಕೇಶನ್ ಅಕ್ರಮದಲ್ಲಿ ಶಾಮೀಲಾಗಿದ್ದಾರೆನ್ನಲಾದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಸೋಮವಾರ ತಡೆ ನೀಡಿದೆ.
ಸರ್ಕಾರ ಸ್ವಾಧೀನಪಡಿಸಿಕೊಂಡಿದ್ದ 24 ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಪ್ರಕರಣದಲ್ಲಿ ಬಿಎಸ್ ವೈ ಅವರ ವಿರುದ್ಧ ವಿಚಾರಣೆಗೆ ಹೈಕೋರ್ಟ್ ಅನುಮತಿ ನೀಡಿತ್ತು.
ಈ ಸಂಬಂಧ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಹೈಕೋರ್ಟ್ ಅದೇಶಕ್ಕೆ ತಡೆ ನೀಡಿದೆ. ಈ ಮೂಲಕ ಸಿಎಂ ಯಡಿಯೂರಪ್ಪ ಅವರು ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ.