ಬೆಳಗಾವಿ: ಕೇಂದ್ರ ಸಚಿವ ಸುರೇಶ ಅಂಗಡಿ ನಿಧನದಿಂದಾಗಿ ಬೆಳಗಾವಿಯಲ್ಲಿ ನೀರವ ಮೌನ ಆವರಿಸಿದೆ. ನಾಲ್ಕು ಬಾರಿ ಸಂಸದರಾಗಿರುವ ಸುರೇಶ ಅಂಗಡಿಯವರು ಜನಾನುರಾಗಿ ರಾಜಕಾರಣಿ.
ಸುರೇಶ್ ರವರು ಸೋಮವ್ವ ಮತ್ತು ಚೆನ್ನಬಸಪ್ಪ ಅಂಗಡಿ ದಂಪತಿಗೆ 1955 ಜೂನ್ 1 ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪಾ ಗ್ರಾಮದಲ್ಲಿ ಜನಿಸಿದರು. ಅಂಗಡಿಗೆ ಮದುವೆಯಾಗಿ 2 ಹೆಣ್ಣು ಮಕ್ಕಳಿದ್ದಾರೆ.
ಸುರೇಶ್ ಅಂಗಡಿ ಅವರು ಬೆಳಗಾವಿಯ ಎಸ್.ಎಸ್.ಎಸ್.ಸಮಿತಿ ಕಾಲೇಜ್ ಆಫ್ ಕಾಮರ್ಸ್ ನಿಂದ ಪದವಿಯನ್ನು ಪಡೆದಿದ್ದರು. ನಂತರ ಅವರು ಬೆಳಗಾವಿಯ ಪ್ರತಿಷ್ಠಿತ ರಾಜ ಲಖಮ್ ಗೌಡ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದಿದ್ದರು.
ಸಾರ್ವಜನಿಕ ಜೀವನಕ್ಕೆ ಪ್ರವೇಶಿಸುವ ಮೊದಲು ಅವರು ತಮ್ಮದೇ ಆದ ಖಾಸಗಿ ವ್ಯವಹಾರವನ್ನು ನಡೆಸುತ್ತಿದ್ದರು.