ಬೆಂಗಳೂರು: ರಾಜ್ಯದ ಆಡಳಿತವರ್ಗಕ್ಕೆ ಸರ್ಕಾರ ಮತ್ತೊಮ್ಮೆ ಮೇಜರ್ ಸರ್ಜರಿ ಮಾಡಿದೆ. 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ಇದೀಗ ಐಎಎಸ್ ಅಧಿಕಾರಿಗಳನ್ನು ಸಾಮೂಹಿಕವಾಗಿ ವರ್ಗಾವಣೆ ಮಾಡಲಾಗಿದೆ.
ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸುತ್ತಿದ್ದು, ಎರಡು ದಿನಗಳ ಹಿಂದಷ್ಟೇ ಐಜಿಪಿ, ಎಸ್ಪಿಗಳು ಸೇರಿದಂತೆ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಗುರುವಾರ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮೂಲಕ ಹಲವಾರು ಇಲಾಖೆಗಳಿಗೆ ಹೊಸ ಮುಖ್ಯಸ್ಥರನ್ನು ನೇಮಕ ಮಾಡಲಾಗಿದೆ.