ಚಾಮರಾಜನಗರ: ಹನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನಿವೇಶನಗಳ ದಾಖಲಾತಿಗಳು ಸಮರ್ಪಕವಾಗಿ ಇಲ್ಲದೆ ಇರುವುದರಿಂದ ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದ್ದಾರೆ.
ಹನೂರು ತಾಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಣಿಜ್ಯ ಸಂಕೀರ್ಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಾಮಿತ್ವ ಯೋಜನೆ ಗ್ರಾಮ ಸಭೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಠಾಣಾ ವ್ಯಾಪ್ತಿಯಲ್ಲಿರುವ ನಿವೇಶನಗಳನ್ನು ಡ್ರೋನ್ ಹಾಗೂ ಯುಎಬಿ ತಂತ್ರಜ್ಞಾನದ ಮೂಲಕ ಸರ್ವೆ ನಡೆಸಿ ಡ್ರೋನ್ ಮುಖಾಂತರ ನಿಮ್ಮ ಜಾಗದ ಅಳತೆಯನ್ನು ನಡೆಸಿ ನಿಮಗೆ ಪಿ ಆರ್ ಕಾರ್ಡ್ ವಿತರಣೆ ಮಾಡಲಾಗುವುದು, ಈ ಪಿಆರ್ ಕಾರ್ಡಿನಲ್ಲಿ ನಿಮ್ಮ ನಿವೇಶನಕ್ಕೆ ಸಂಬಂಧಪಟ್ಟಂತೆ ಎಲ್ಲ ಮಾಹಿತಿಗಳು ಸಿಗುತ್ತದೆ. ಇದಲ್ಲದೆ ನೀವು ನಿಮ್ಮ ಜಾಗದ ಸಂಪೂರ್ಣ ಮಾಹಿತಿಯನ್ನು ಮೊಬೈಲ್ ಮುಖಾಂತರ ತಿಳಿದುಕೊಳ್ಳಬಹುದು ಈ ಯೋಜನೆಯನ್ನು ಪ್ರತಿಯೊಬ್ಬರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಯು.ಎ.ವಿ ತಂತ್ರಜ್ಞಾನದ ಮೂಲಕ ಹಾಗೂ ಡ್ರೋನ್ ಮುಖಾಂತರ ಈ ಹಿಂದೆ ಅಜ್ಜೀಪುರ ಹಾಗೂ ಸೂಳೇರಿಪಾಳ್ಯ ಗ್ರಾಮ ಪಂಚಾಯತ್ ನಲ್ಲಿ ಮಾಡಲಾಗಿದ್ದು, ಇದೀಗ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸರ್ವೆ ಮಾಡಲಾಗುತ್ತಿದೆ ಮುಂದಿನ ದಿನಗಳಲ್ಲಿ ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲೂ ಈ ಯೋಜನೆ ಮುಂದುವರೆಯಲಿದೆ, ಮೊದಲು ಗ್ರಾಮ ಠಾಣ ವ್ಯಾಪ್ತಿಗಳಲ್ಲಿ ಸರ್ವೆ ನಡೆಸಲಾಗುವುದು ನಂತರ ಮರು ಸರ್ವೆ ನಡೆಸಿ ಜಮೀನುಗಳಲ್ಲಿ ನಿರ್ಮಾಣ ಮಾಡಿಕೊಂಡಿರುವ ಮನೆ ಹಾಗೂ ನಿವೇಶನಗಳ ಬಗ್ಗೆ ಸರ್ವೆ ಮಾಡಿಸಿ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಡಿಡಿ ಎಲ್ ಆರ್ ನಟರಾಜು ಮಾತನಾಡಿ ಕಳೆದ 50 ವರ್ಷಗಳ ಹಿಂದೆ ಕಂದಾಯ ಕಟ್ಟಿರುವ ಜಮೀನುಗಳಿಗೆ ಮಾತ್ರ ಸರ್ವೆ ಮಾಡಲಾಗಿತ್ತು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಠಾಣಾ ಆಸ್ತಿಗಳ ಬಗ್ಗೆ ಸಮರ್ಪಕ ದಾಖಲಾತಿಗಳು ಲಭ್ಯವಿಲ್ಲದೆ ಇರುವುದರಿಂದ ಇದೀಗ ಡ್ರೋನ್ ಮುಖಾಂತರ ನಿವೇಶನಗಳನ್ನು ಸರ್ವೆ ಮಾಡಲಾಗುತ್ತಿದೆ. ನಿವೇಶನದ ಮಾಲೀಕರು ಹಾಗೂ ಗ್ರಾಮ ಪಂಚಾಯಿತಿಯವರ ಜೊತೆ ಚರ್ಚೆ ನಡೆಸಿ ಪಿಆರ್ ಕಾರ್ಡ್ ಗಳ ಡ್ರಾಪ್ಟಗಳನ್ನು ವಿತರಿಸಲಾಗುತ್ತಿದೆ. ಈ ಕಾಡಿನಲ್ಲಿ ಯಾವುದಾದರೂ ತೊಂದರೆಗಳಿದ್ದಲ್ಲಿ ಪಂಚಾಯಿತಿ ಪಿಡಿಒ ಅಧಿಕಾರಿಗಳ ಮುಖಾಂತರ ಸರಿಪಡಿಸಿಕೊಳ್ಳಬೇಕು. ಯಾವುದೇ ತೊಂದರೆಗಳಿಲ್ಲದಿದ್ದರೆ 30 ದಿನಗಳ ಒಳಗಾಗಿ ನಿಮ್ಮ ಸಂಪೂರ್ಣ ಮಾಹಿತಿಯುಳ್ಳ ಪಿಆರ್ ಕಾರ್ಡ್ ವಿತರಿಸಲಾಗುವುದು ಎಂದರು.
ಮ.ಮಹದೇಶ್ವರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ರಘು ಮಾತನಾಡಿ ಸ್ವಾಮಿತ್ವ ಯೋಜನೆಯನ್ನು ಕೇಂದ್ರ ಸರ್ಕಾರವು 2021 ರಲ್ಲಿ ಜಾರಿಗೆ ತರಲಾಯಿತು, ಸ್ವಾಮಿತ್ವ ಅಂದರೆ ನಮ್ಮ ಆಸ್ತಿಗೆ ದಾಖಲಾತಿ ಮಾಡಿಕೊಳ್ಳುವುದು, ಸರ್ಕಾರವು ಮನೆ ಮನೆಗೆ ಹೋಗಿ ಅವರ ಜಾಗಕ್ಕೆ ದಾಖಲಾತಿಗಳನ್ನು ಮಾಡಿಕೊಡುತ್ತಿದೆ ಇದನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ತಿಳಿಸಿದರು.
ಸಾರ್ವಜನಿಕರೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಶಾಸಕರು .
ಮಲೈ ಮಹದೇಶ್ವರ ಬೆಟ್ಟದ ಹಾಡಿಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು,ರಸ್ತೆ, ಸ್ವಚ್ಛತೆ,ರಸ್ತೆ ಬೀದಿ ದೀಪ,ಅಳವಡಿಗೆ ಶಾಸಕರಿಗೆ ಮನವಿ ಗ್ರಾಮಸ್ಥರು ಮನವಿಯನ್ನು ಮಾಡಿದರು, ಇದಕ್ಕೆ ಸ್ಪಂದಿಸಿದ ಶಾಸಕರು ಈಗಾಗಲೇ ಮುಖ್ಯಮಂತ್ರಿಗಳ ಕಳೆದ ಬಾರಿ ಮಲೆ ಮಹದೇಶ್ವರ ಬಂದಿದ್ದ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳದ ಸಿದ್ದರಾಮಯ್ಯ ರವರ ಬಳಿ ಮನವಿ ಮಾಡಿದ್ದು ಅವರು ಈಗಾಗಲೇ ಹಾಡಿಗಳ ಅಬಿವೃದ್ಧಿ ರಸ್ತೆ,ಹಾಗೂ ವಿದ್ಯುತ್,ಹಾಗೂ ಈಗಾಗಲೇ ಇದಕ್ಕೆ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ ಎಂದರು,
ಶಾಂತಿ ನಗರ ಕಾಲೋನಿ ಹಾಗೂ ಕಾಡಹೋಲ ಗ್ರಾಮದಲ್ಲಿ ಕಾಡು ಪ್ರಾಣಿಗಳ ಹಾವಳಿಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಸರ್ಕಾರದ ಮಟ್ಟದಲ್ಲಿ ಈಗಾಗಲೇ ಕಾಡು ಪ್ರಾಣಿಗಳ ಹಾವಳಿಯನ್ನ ತಡೆಗಟ್ಟಲು ಮೆಸ್ ತಂತಿಯನ್ನು ಸಬ್ಸಿಡಿ ರೂಪದಲ್ಲಿ ರೈತರಿಗೆ ನೀಡುವಂತೆ ಸರ್ಕಾರಕ್ಕೆ ಮನವಿಯನ್ನು ಮಾಡಲಾಗಿದೆ.ಹಾಗೆ ಗ್ರಾಮಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು,
ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ರಘು, ಮಲೈ ಮಹದೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರ್ಚನಾ,ಸರ್ವೇ ಇಲಾಖೆಯ ಸೂಪರಿಡೆಂಟ್ ಚೇತನ್ ಕುಮಾರ್, ಸರ್ವೇ ಇಲಾಖೆಯ ಎಡಿಎಲ್ಆರ್ ನಟರಾಜು,ತಾಲೂಕು ದಂಡಾಧಿಕಾರಿ ಚೈತ್ರಾ,ತಾಲೂಕು ಸರ್ವೇ ಶ್ರೀನಿವಾಸ, ಗ್ರಾಮ ಪಂಚಾಯಿತಿ ಅಬಿವೃದ್ಧಿ ಅಧಿಕಾರಿ ಕಿರಣ್ ಕುಮಾರ್ ಮೊದಲಾದವರು ಹಾಜರಿದ್ದರು.




























































