ಬೆಂಗಳೂರು: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ, ದೇಶಕ್ಕಾಗಿ ಹುತಾತ್ಮರಾದ ಮಹಾತ್ಮರನ್ನು ಇಂದು ಸ್ಮರಿಸುವ ವಿಶೇಷ ಕಾರ್ಯಕ್ರಮ ಗಮನಸೆಳೆಯಿತು.
ವಿಧಾನಸೌಧ ಮತ್ತು ವಿಕಾಸಸೌಧ ನಡುವೆ ಇರುವ ಗಾಂಧೀಜಿ ಪ್ರತಿಮೆ ಬಳಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹುತಾತ್ಮ ಮಹಾಪುರುಷರಿಗೆ ಗೌರವ ಸಲ್ಲಿಸಿದರು.
ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಎರಡು ನಿಮಿಷಗಳ ಮೌನಾಚರಣೆಯಲ್ಲಿ ಪಾಲ್ಗೊಂಡರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಆರ್.ಅಶೋಕ್ ಸಹಿತ ಸಚಿವರು, ಶಾಸಕರು, ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.