ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವಾದ ಸೋಮವಾರ ನೂತನ ಸಂಸದರ ಪ್ರಮಾಣವಚನ ನೆರವೇರಿತು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಮಂಡ್ಯ ಸಂಸದರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಮಂಗಳೂರು ಸಂಸದ ಬ್ರಿಜೇಶ್ ಚೌಟ ಅವರೂ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ತುಳುನಾಡಿನ ದೈವ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿ ತುಳುನಾಡಿನ ಜನರ ಮನಗೆದ್ದರು.
“ನಾನು ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ದೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದೂ, ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದೂ ಮತ್ತು ನಾನು ಈಗ ವಹಿಸಿಕೊಳ್ಳಲಿರುವ ಕರ್ತವ್ಯವನ್ನು… pic.twitter.com/cpKuuuvOvs
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) June 24, 2024
ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ನಾಯಕ ಭರ್ತೃಹರಿ ಮಹತಾಬ್ ಅವರು ಪ್ರಮಾಣ ವಚನ ಬೋಧಿಸಿದರು.
ಚೌಟ ಅವರ ಪ್ರಮಾಣವಚನ ಹೀಗಿತ್ತು:
“ನಾನು ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ದೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದೂ, ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದೂ ಮತ್ತು ನಾನು ಈಗ ವಹಿಸಿಕೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆಂದೂ, ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ…” ಎಂದು ಸಂಸದರಾಗಿ ಬ್ರಿಜೇಶ್ ಚೌಟ ಅವರು ಪ್ರಮಾಣವಚನ ಸ್ವೀಕರಿಸಿದರು.