ದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಜ್ ಮಹಲ್ ಸೇರಿದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ ವ್ಯಾಪ್ತಿಯಲ್ಲಿರುವ ಎಲ್ಲಾ ಕೇಂದ್ರ ಸಂರಕ್ಷಿತ ಸ್ಮಾರಕಗಳು, ತಾಣಗಳು, ವಸ್ತು ಸಂಗ್ರಹಾಲಯಗಳನ್ನು ಮೇ 15 ರವರೆಗೆ ಬಂದ್ ಮಾಡಲಾಗಿದೆ. ಈ ಕುರಿತಂತೆ ಕೇಂದ್ರ ಸಂಸ್ಕೃತಿ ಸಚಿವಾಲಯ ಆದೇಶ ಹೊರಡಿಸಿದೆ.
ಸಂಸ್ಕೃತಿ ಸಚಿವ ಪ್ರಹ್ಲಾದ್ ಪಟೇಲ್ ಕೂಡಾ ಈ ಸಂಬಂಧ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
कोरोना की महामारी के वर्तमान प्रकोप को देखते हुए @MinOfCultureGoI ने @ASIGoI के द्वारा संरक्षित सभी स्मारकों को आगामी 15 मई तक बंद रखने का फ़ैसला किया है @PMOIndia @tourismgoi @incredibleindia pic.twitter.com/EZX2jNQI9V
— Prahlad Singh Patel (मोदी का परिवार) (@prahladspatel) April 15, 2021