ಚೆನ್ನೈ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದ ತಮಿಳುನಾಡಿನಲ್ಲಿ ಮತದಾರರ ಪಟ್ಟಿಯಲ್ಲಿನ ಗೊಂದಲ ಬಗ್ಗೆ ಬಿಜೆಪಿ ಆಕ್ರೋಶ ಹೊರಹಾಕಿದೆ.
ಶುಕ್ರವಾರ ನಡೆದ ಮೊದಲ ಹಂತದ ಮತದಾನದ ವೇಳೆಮತದಾರರ ಪಟ್ಟಿಯಿಂದ ಹೆಸರು ನಾಪತ್ತೆಯಾಗಿದೆ ಎಂಬ ದೂರುಗಳು ಕೇಳಿಬಂದಿವೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ, ಹೆಚ್ಚಿನ ಸಂಖ್ಯೆಯ ಮತದಾರರ ಹೆಸರು ನಾಪತ್ತೆಯಾಗಿರುವ ಸ್ಥಳಗಳಲ್ಲಿ ಮರು ಮತದಾನಕ್ಕೆ ಆಗ್ರಹಿಸಿದ್ದಾರೆ.
ತಮಿಳುನಾಡಿನ 39 ಲೋಕಸಭಾ ಕ್ಷೇತ್ರಳಲ್ಲಿ ಶುಕ್ರವಾರ ಮತದಾನ ನಡೆದಿದೆ. ಹಲವೆಡೆ ಹಲವಾರು ಬಿಜೆಪಿ ಕಾರ್ಯಕರ್ತರ ಹೆಸರು ನಾಪತ್ತೆಯಾಗಿದೆ ಎಂದು ಆರೋಪಿಸಿರುವ ಅಣ್ಣಾಮಲೈ, ರಾಜಕೀಯ ಹಸ್ತಕ್ಷೇಪದಿಂದಾಗಿ ಮತದಾರರ ಹೆಸರುಗಳು ನಾಪತ್ತೆಯಾಗಿದೆ ಎಂದು ಆರೋಪ ಮಾಡಿದ್ದಾರೆ.