ಚೆನ್ನೈ: ‘ಫೆಂಗಲ್’ ಬೆನ್ನಲ್ಲೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಭಾರೀ ಮಳೆಯ ಆತಂಕ ಎದುರಾಗಿದೆ. ಚೆನ್ನೈ ಸೇರಿದಂತೆ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚೆನ್ನೈ, ಕಾಂಚೀಪುರಂ ಮತ್ತು ತಿರುವಳ್ಳೂರ್ ಸುತ್ತಮುತ್ತಲ ಜಿಲ್ಲೆಗಳಲ್ಲಿ ಬುಧವಾರ ರಾತ್ರಿಯಿಂದಲೇ ಭಾರೀ ಮಳೆಯಾಗುತ್ತಿದೆ. ಈ ಮಳೆ ಅವಾಂತರಗಳ ಕಾರಣದಿಂದಾಗಿ ತಮಿಳುನಾಡಿನ ಹಲವೆಡೆ ಶಾಲೆಗಳಿಗೆ ರಜೆ ಘೋಷಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲೂ ತುಂತುರು ಮಳೆ:
ಬೆಂಗಳೂರಿನಲ್ಲೂ ತುಂತುರು ಮಳೆಯಾಗುತ್ತಿದೆ. ಮೂರ್ನಾಲ್ಕು ದಿನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.