ದೆಹಲಿ: ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ತರುಣ್ ಗೊಗೊಯಿ, ಗೌಹತಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ತರುಣ್ ಗೊಗೊಯಿ ಅವರು ಮೂರು ಭಾರಿ ಅಸ್ಸಾಂ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು
84 ವರ್ಷದ ತರುಣ್ ಗೊಗೊಯಿ ಅವರು ಎರಡು ತಿಂಗಳ ಚಿಕಿತ್ಸೆ ಬಳಿಕ ಕೊರೋನಾದಿಂದ ಚೇತರಿಸಿಕೊಂಡಿದ್ದರು. ಆದರೆ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿ ನವೆಂಬರ್ 2ರಂದು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.





















































