ಮಂಗಳೂರು: ತೌಕ್ತೇ ಚಂಡಮಾರುತದ ಪರಿಣಾಮವಾಗಿ ಮಂಗಳೂರು ಸೇರಿದಂತೆ ಕರಾವಳಿ ಬಿರುಗಾಳಿ ಸಹಿತ ಭಾರಿ ಮಳೆ ಆಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾಸರಗೋಡು, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತ ಸೂಚಿಸಿದೆ .ಜಿಲ್ಲಾಡಳಿತ ಭಾರಿ ಮುಂಜಾಗ್ರತಾ ಕ್ರಮ ಕೈಗೊಂಡಿದೆ.
ಚಂಡಮಾರುತದ ಪರಿಣಾಮವಾಗಿ ಕೇರಳಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಾಸರಗೋಡು, ಮಂಗಳೂರು ಸಹಿತ ಕಾರವಳಿ ತೀರದಲ್ಲಿ ವರ್ಷಧಾರೆಯಾಗಿದೆ. ದಿಢೀರನೆ ಮಳೆಯಾಗಿದ್ದರಿಂದಾಗಿ ಮಂಗಳೂರಿನ ಹಲವೆಡೆ ಅವಾಂತರವೇ ಸೃಷ್ಟಿಯಾಗಿದೆ.
ಕರಾವಳಿ ಮಾತ್ರವಲ್ಲ, ಮಲೆನಾಡು, ಬಯಲು ಸೀಮೆ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ತತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತವು ಇವತ್ತು ರಾತ್ರಿ ಕರ್ನಾಟಕದ ಕರಾವಳಿಯಿಂದ ಮತ್ತಷ್ಟು ಬಲಗೊಂಡು ಮಹಾರಾಷ್ಟ್ರ ಕರಾವಳಿಯತ್ತ ಸಾಗುವ ಸಾಧ್ಯತೆಗಳಿವೆ.