ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಸಂಬಂಧ ಈ ವಾರವೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, 1:1 ಅನುಪಾತದಲ್ಲಿ ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಈ ವಾರ ಪ್ರಕಟಿಸಲು ಸಿದ್ದತೆ ನಡೆದಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಸಂಬಂಧಿಸಿದ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಸಂಬಂಧಿಸಿದ 1:1 'ತಾತ್ಕಾಲಿಕ ಆಯ್ಕೆ' ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು.
— B.C Nagesh (Modi Ya Parivara) (@BCNagesh_bjp) November 15, 2022
























































