ಬೆಂಗಳೂರು: ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಘೋಷಿಸಿ ಮೃತ ಶಿಕ್ಷಕರಿಗೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ.
ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡುವಂತೆ ನಾನು ಆಗ್ರಹಿಸುತ್ತೇನೆ.
1/4— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 24, 2021
ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ, 145ಕ್ಕೂ ಹೆಚ್ಚು ಶಿಕ್ಷಕರು ಹೈದರಾಬಾದ್-ಕರ್ನಾಟಕದಲ್ಲಿ ಅಂದರೆ ಕಲ್ಯಾಣ ಕರ್ನಾಟಕದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಹೋಗಿದೆ ಎಂದು ಗಮನಸೆಳೆದಿದ್ದಾರೆ.
145ಕ್ಕೂ ಹೆಚ್ಚು ಶಿಕ್ಷಕರು ಹೈದರಾಬಾದ್-ಕರ್ನಾಟಕದಲ್ಲಿ ಅಂದರೆ ಕಲ್ಯಾಣ ಕರ್ನಾಟಕದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಹೋಗಿದೆ.
2/4— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 24, 2021
ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಅವರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. ಇನ್ನೂ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ ಎಂದವರು ಹೃಳಿದ್ದಾರೆ.
ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಅವರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. ಇನ್ನೂ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ.
3/4— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 24, 2021
ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ.
4/4— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 24, 2021