ಬೆಂಗಳೂರು: ರಾಜಧಾನಿ ಬೆಂಗಳೂರು ಪೊಲೀಸರು ಭರ್ಜರಿ ಬೇಟೆಯಾಡಿ ಶಂಕಿತ ಉಗ್ರರೆನ್ನಲಾದ ಗುಂಪನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಶಂಕೆ ಹಿನ್ನೆಲೆ ಐವರು ಶಂಕಿತರನ್ನು ಬಂಧಿಸಿರುವ ಪೊಲೀಸರು ಈ ಆರೋಪಿಗಳಿಗೆ ಭಯೋತ್ಪಾದಕರೊಂದಿಗೆ ನಂಟಿರುವ ಸಂಗತಿಗಳತ್ತ ಗಮನ ಕೇಂದ್ರೀಕರಿಸಿದ್ದಾರೆ.
ಸಿಸಿಬಿ ಪೊಲೀಸರು ಬುಧವಾರ ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದು, ಸಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶೀರ್, ಜಾಹಿದ್ ಎಂಬವರನ್ನು ಬಂಧಿಸಿದ್ದಾರೆ. ಈ ಆರೋಪಿಗಳ ಪೈಕಿ ಕೆಲವರು 2017ರಲ್ಲಿ ಬೆಂಗಳೂರಿನ ಆರ್.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದರೆನ್ನಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಿಂದಲೇ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದರು ಎಂಬ ಈ ಬಗ್ಗೆ ಸಿಸಿಬಿ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.