ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಶ್ಚಿಯನ್ ಧರ್ಮದ ಅಧಿಕಾರಿಯನ್ನು ಸರ್ಕಾರ ನೇಮಕ ಮಾಡಿದೆ ಎಂಬ ಸುದ್ದಿಯನ್ನು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ನಿರಾಕರಿಸಿದ್ದಾರೆ. ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರಲ್ಲ. ಅವರು ಹಿಂದುಳಿದ ಜಾತಿಗೆ ಸೇರಿದವರು ಎಂದು ಸಚಿವರು ತಿಳಿಸಿದ್ದಾರೆ.
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಬಿಜೆಪಿಯ ಮತ್ತೊಂದು ಸುಳ್ಳು ಹಬ್ಬಿಸುವ ಸೋಶಿಯಲ್ ಮೀಡಿಯಾ ವಾಟ್ಸಾಪ್ ಫೇಕ್ ಯುನಿವರ್ಸಿಟಿ ಆಟವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯ ಮತ್ತೊಂದು ಫೇಕ್ ವಾಟ್ಸಪ್ ಯುನಿವರ್ಸಿಟಿಯ ಸುಳ್ಳು ಸುದ್ದಿ. 🚨
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ.
ಇದು @BJP4Karnatakaದ ಮತ್ತೊಂದು ಸುಳ್ಳು ಹಬ್ಬಿಸುವ ಸೋಶಿಯಲ್ ಮೀಡಿಯಾ ವಾಟ್ಸಾಪ್ ಫೇಕ್… pic.twitter.com/OJTmYm3ZsD
— Ramalinga Reddy (@RLR_BTM) May 2, 2024
ದೇವಸ್ಥಾನಕ್ಕೆ ನೇಮಕವಾಗಿರುವ ಅಧಿಕಾರಿ ಹಿಂದುಳಿದ ಜಾತಿಗೆ ಸೇರಿದವರಾಗಿದ್ದು, ದಾಖಲೆಗಳು ಇವೆ ಎಂದು ಸ್ಪಷ್ಟಪಡಿಸಿರುವ ಸಚಿವರು, .ರಾಜ್ಯದಲ್ಲಿ ಇನ್ನೊಂದು ಹಂತದ ಚುನಾವಣೆ ಹತ್ತಿರ ಇರೋದರಿಂದ ಜನರನ್ನು ದಾರಿ ತಪ್ಪಿಸಿ ಅವರ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸುತ್ತಿರುವ ಬಿಜೆಪಿಗೆ ಸೋಲಿನ ಭಯ ಶುರುವಾಗಿರುವುದು ಸ್ಪಷ್ಟ ಎಂದಿದ್ದಾರೆ.