ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿಯ ಆಮ್ ಆದ್ಮಿ ಸರ್ಕಾರ ವಿಶ್ವಾಸ ಮತ ಗೆದ್ದಿದೆ. ವಿಧಾನಸಭೆಯಲ್ಲಿ ಶನಿವಾರ ಧ್ವನಿ ಮತದ ಮೂಲಕ ಕೇಜ್ರಿವಾಲ್ ಸರ್ಕಾರ ವಿಶ್ವಾಸಮತ ಯಾಚನೆ ಮಾಡಿದ್ದು, ಸರ್ಕಾರವನ್ನು ಸುಭಧ್ರಗೊಳಿಸಿದೆ.
ಅಬಕಾರಿ ನೀತಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಆಮ್ ಆದ್ಮಿ ಪಕ್ಷದ ಪ್ರಮುಖರನ್ನು ಬಂಧಿಸಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೂ ಸಮನ್ಸ್ ನೀಡಿದೆ. ಈ ಬೆಳವಣಿಗೆಯ ನಡುವೆಯೇ ಕೇಜ್ರಿವಾಲ್ ಸರ್ಕಾರ ಎರಡನೇ ಬಾರಿಗೆ ವಿಶ್ವಾಸ ಮತ ಯಾಚಿಸಿ ಭದ್ರವಾಗಿದೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (AAP) 62 ಶಾಸಕರ ಬಹುಮತ ಹೊಂದಿಡೇ. ಬಿಜೆಪಿ ಎಂಟು ಶಾಸಕರನ್ನು ಹೊಂದಿದೆ.



















































