ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಹಳಿ ತಪ್ಪಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ವಿಶ್ಲೇಷಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಸರಕಾರ ಬಂದ ಬಳಿಕ ಸಾಲ ಹೆಚ್ಚುತ್ತ ಹೋಗಿದೆ. ಅದರ ಜೊತೆಗೇ, ಎಸ್‍ಇಪಿ ಟಿಎಸ್‍ಪಿ ಹಣವನ್ನು ಗ್ಯಾರಂಟಿಗೆ ಬಳಸಿದ್ದಾರೆ. ಇದೆಲ್ಲವೂ ಆರ್ಥಿಕ ಸ್ಥಿತಿ ಹಳಿ ತಪ್ಪಿದ್ದನ್ನು ಸ್ಪಷ್ಟಪಡಿಸುತ್ತದೆ ಎಂದು ನುಡಿದರು.
ಭವಿಷ್ಯದಲ್ಲಿ ಮರುಪಾವತಿ ಸವಾಲಾಗಿ ಪರಿಣಮಿಸಲಿದೆ. ಸಾಲ ಮಾಡಿ ತುಪ್ಪ ತಿನ್ನುವ ಬದಲು ಸಂಪನ್ಮೂಲ ಹೆಚ್ಚಳಕ್ಕೆ ಗಮನ ಕೊಡಬೇಕಿತ್ತು ಎಂದು ತಿಳಿಸಿದರು. ಎಷ್ಟೋ ಇಲಾಖೆಗಳಲ್ಲಿ ವೇತನ ತಿಂಗಳುಗಟ್ಟಲೆ ವಿಳಂಬವಾಗುತ್ತಿದೆ ಎಂದು ಆಕ್ಷೇಪಿಸಿದರು. ರಾಜ್ಯದ ಆರ್ಥಿಕ ಸ್ಥಿತಿಯೇ ಮುಳುಗುವ ಹಡಗಿನಂತಿದೆ ಎಂದು ತಿಳಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕಕುಮಾರ್, , ವಿಧಾನಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಕೆ. ಪ್ರತಾಪಸಿಂಹ ನಾಯಕ್ ಅವರು ಉಪಸ್ಥಿತರಿದ್ದರು.





















































