ಬೆಂಗಳೂರು: ರಾಜ್ಯ ಬಿಜೆಪಿ ವಿರುದ್ದ ಸಮರ ಸಾರಿರುವ ಕಾಂಗ್ರೆಸ್ ವಿವಿಧ ಹಗರಣಗಳನ್ನು ಮುಂದಿಟ್ಟು ಕಮಲ ನಾಯಕರನ್ನು ಪೇಚಿಗೆ ಸಿಲುಕಿಸುವ ಪ್ರಯತ್ನ ನಡೆಸುತ್ತಿದೆ. ಇದೀಗ ಬಿಜೆಪಿ ಆಂತರಿಕ ಬೆಳವಣಿಗೆಯನ್ನು ಮುಂದಿಟ್ಟು ಸರ್ಕಾರವನ್ನೇ ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಕಾಂಗ್ರೆಸ್‌ನಿಂದ ನಡೆದಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮಾಡಿರುವ ಸರಣಿ ಟ್ವೀಟ್ ಗಮನಸೆಳೆದಿದೆ.
ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ. ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು ಬಿಜೆಪಿ ಪಕ್ಷ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ ಎಂದು ವ್ಯಂಗ್ಯವಾಡಿದೆ. ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ ಎಂದು ವ್ಯಾಖ್ಯಾನಿಸಿದೆ.
ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ.
ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು @BJP4Karnataka ಪಕ್ಷ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ.
ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ.#PuppetCM
— Karnataka Congress (@INCKarnataka) August 9, 2022
ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ ‘ಕತ್ತಿ ವರಸೆ’ ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ! ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ ಬಿಜೆಪಿಯ ಆಂತರಿಕ ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ! 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ! ಬಸವರಾಜ್ ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ ಎಂದು ವಿಶ್ಲೇಷಿಸಿರುವ ಕಾಂಗ್ರೆಸ್, ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ ಎಂದಿದೆ.
ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ!
40% ಸರ್ಕಾರದಲ್ಲಿ '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ!#PuppetCM @BSBommai ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ.ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ.
— Karnataka Congress (@INCKarnataka) August 9, 2022







































































