ಬೆಂಗಳೂರು: ಬಿಟ್ ಕಾಯಿನ್ ಹಗರಣ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ದ ಮತ್ತೆ ಬಾಣ ಪ್ರಯೋಗಿಸಿದ್ದಾರೆ. ಇದೀಗ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿಯ ವಿಚಾರದಲ್ಲಿ ಬೊಮ್ಮಾಯಿ ಸರ್ಕಾರದ ಬಗ್ಗೆ ಕೈನಾಯಕರು ತಮಗಿರುವ ಅಪನಂಬಿಕೆಯನ್ನು ಹೊರಹಾಕಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಆರೋಪಿ ಶ್ರೀಕಿಯ ಜೀವಕ್ಕೆ ಸಂಚಕಾರ ಇರುವ ಬಗ್ಗೆ ಆತಂಕ ಹೊರಹಾಕಿದ್ದಾರೆ. ಬಿಟ್ ಕಾಯಿನ್ ಹಗರಣದ ಸೂತ್ರಧಾರನೆನ್ನಲಾದ ಶ್ರೀಕಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. ವಿಶ್ವದಾದ್ಯಂತ ಗಮನ ಸೆಳೆದಿರುವ ಈ ಹಗರಣದಲ್ಲಿ ಬಹಳಷ್ಟು ಪ್ರಭಾವಶಾಲಿಗಳು ಷಾಮೀಲಾಗಿರುವ ಅನುಮಾನದ ಹಿನ್ನೆಲೆಯಲ್ಲಿ ಈ ಭದ್ರತೆ ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಬಿಟ್ ಕಾಯಿನ್ ಹಗರಣದ ಸೂತ್ರಧಾರನೆನ್ನಲಾದ ಶ್ರೀಕೃಷ್ಣ/ ಶ್ರೀಕಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಬೇಕೆಂದು @CMofKarnataka ಅವರನ್ನು ಒತ್ತಾಯಿಸುತ್ತೇನೆ.
ವಿಶ್ವದಾದ್ಯಂತ ಗಮನ ಸೆಳೆದಿರುವ ಈ ಹಗರಣದಲ್ಲಿ ಬಹಳಷ್ಟು ಪ್ರಭಾವಶಾಲಿಗಳು ಷಾಮೀಲಾಗಿರುವ ಅನುಮಾನದ ಹಿನ್ನೆಲೆಯಲ್ಲಿ ಈ ಭದ್ರತೆ ಅಗತ್ಯವಾಗಿದೆ.#Bitcoin
1/5— Siddaramaiah (@siddaramaiah) November 15, 2021
ಬಿಟ್ ಕಾಯಿನ್ ಹಗರಣ ಸ್ಪೋಟಗೊಂಡ ನಂತರ ಸಣ್ಣ ಮಟ್ಟದ ಆರೋಪದ ಮೇಲೆ ನಾಟಕೀಯ ರೀತಿಯಲ್ಲಿ ನಡೆದಿರುವ ಶ್ರೀಕೃಷ್ಣನ ಬಂಧನ, ಅಷ್ಟೇ ನಾಟಕೀಯವಾಗಿ ಜಾಮೀನು ಮೇಲೆ ಬಿಡುಗಡೆಯಾಗಿರುವುದು ಪೊಲೀಸರ ನಡವಳಿಕೆಗಳ ಬಗ್ಗೆ ಸಂಶಯಗಳಿಗೆ ಕಾರಣವಾಗಿದೆ ಎಂದಗರು ಹೇಳಿದ್ದಾರೆ.
ಬಿಟ್ ಕಾಯಿನ್ ಹಗರಣ ಸ್ಪೋಟಗೊಂಡ ನಂತರ
ಸಣ್ಣ ಮಟ್ಟದ ಆರೋಪದ
ಮೇಲೆ ನಾಟಕೀಯ ರೀತಿಯಲ್ಲಿ ನಡೆದಿರುವ ಶ್ರೀಕೃಷ್ಣನ ಬಂಧನ,
ಅಷ್ಟೇ ನಾಟಕೀಯವಾಗಿ ಜಾಮೀನು ಮೇಲೆ ಬಿಡುಗಡೆಯಾಗಿರುವುದು ಪೊಲೀಸರ ನಡವಳಿಕೆಗಳ ಬಗ್ಗೆ ಸಂಶಯಗಳಿಗೆ ಕಾರಣವಾಗಿದೆ.@CMofKarnataka#Bitcoin
2/5— Siddaramaiah (@siddaramaiah) November 15, 2021
ಕಳೆದ ವರ್ಷ ರಾಜ್ಯ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಶ್ರೀಕಿಗೆ ಮಾದಕ ವಸ್ತು ಚಟ ಇದ್ದುದನ್ನು ಹೇಳಲಾಗಿದೆ. ಆ ಸಮಯದಲ್ಲಿ ಶ್ರೀಕಿ ತಂದೆಯೇ ಪತ್ರ ಬರೆದು ತಮ್ಮ ಮಗನಿಗೆ ಪೊಲೀಸರು ಡ್ರಗ್ಸ್ ನೀಡಿದ್ದರು ಎಂದು ಆರೋಪಿಸಿದ್ದರು ಎನ್ನುವುದು ಗಮನಾರ್ಹ ಎಂದವರು ಹೇಳಿದ್ದಾರೆ.
ಕಳೆದ ವರ್ಷ ರಾಜ್ಯ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ
ಶ್ರೀಕಿಗೆ ಮಾದಕ ವಸ್ತು ಚಟ ಇದ್ದುದನ್ನು ಹೇಳಲಾಗಿದೆ.ಆ ಸಮಯದಲ್ಲಿ ಶ್ರೀಕಿ ತಂದೆಯೇ ಪತ್ರ ಬರೆದು ತಮ್ಮ ಮಗನಿಗೆ ಪೊಲೀಸರು ಡ್ರಗ್ಸ್ ನೀಡಿದ್ದರು ಎಂದು ಆರೋಪಿಸಿದ್ದರು
ಎನ್ನುವುದು ಗಮನಾರ್ಹ. @CMofKarnataka #Bitcoin
3/5— Siddaramaiah (@siddaramaiah) November 15, 2021
ಶ್ರೀಕಿ ಈಗಲೂ ಡ್ರಗ್ ವ್ಯಸನಿಯೇ? ವ್ಯಸನಿಯಾಗಿದ್ದರೆ ಪೊಲೀಸರು ಈ ಬಾರಿ ಬಂಧಿಸಿದಾಗ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆಯೇ? ಡ್ರಗ್ಸ್ ವ್ಯಸನಿ ಎನ್ನುವುದು ಪರೀಕ್ಷೆಯಿಂದ ದೃಡಪಟ್ಟಿದ್ದರೆ ಸೂಕ್ತ ಚಿಕಿತ್ಸೆ ನೀಡಲಾಗಿದೆಯೇ? ಈ ಬಗ್ಗೆ ಸಿಎಂ ಹಾಗೂ ರಾಜ್ಯ ಗೃಹ ಸಚಿವರು ಮಾಹಿತಿ ನೀಡಬೇಕಿದೆ ಎಂದವರು ಹೇಳಿದ್ದಾರೆ.
ಶ್ರೀಕಿ ಈಗಲೂ ಡ್ರಗ್ ವ್ಯಸನಿಯೇ? ವ್ಯಸನಿಯಾಗಿದ್ದರೆ ಪೊಲೀಸರು ಈ ಬಾರಿ ಬಂಧಿಸಿದಾಗ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆಯೇ? ಡ್ರಗ್ಸ್ ವ್ಯಸನಿ ಎನ್ನುವುದು ಪರೀಕ್ಷೆಯಿಂದ ದೃಡಪಟ್ಟಿದ್ದರೆ ಸೂಕ್ತ ಚಿಕಿತ್ಸೆ ನೀಡಲಾಗಿದೆಯೇ?
ಈ ಬಗ್ಗೆ @CMofKarnataka
ಮತ್ತು
ರಾಜ್ಯ ಗೃಹ ಸಚಿವರು ಮಾಹಿತಿ ನೀಡಬೇಕು.#Bitcoin
4/5— Siddaramaiah (@siddaramaiah) November 15, 2021
ಬಿಟ್ ಕಾಯಿನ್ ಹಗರಣ ತಂತ್ರಜ್ಞಾನ ಅವಲಂಬಿಸಿರುವ ‘ಬಿಳಿಕಾಲರ್ ಅಪರಾಧ’. ಇದಕ್ಕೆ ಸಂಬಂಧಿಸಿದ ಖಾತೆಗಳ ಪಾಸ್ ವರ್ಡ್ ಸೇರಿದಂತೆ ಬಹಳಷ್ಟು ಮಾಹಿತಿಗಳು ಶ್ರೀಕಿಯ ನೆನಪಲ್ಲಿ ಮಾತ್ರ ಇದೆ, ಲಿಖಿತ ದಾಖಲೆಗಳಿಲ್ಲ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀಕಿಯ ಪ್ರಾಣಕ್ಕೆ ಅಪಾಯದ ಸಾಧ್ಯತೆ ಇದೆ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದ್ದಾರೆ.
ಬಿಟ್ ಕಾಯಿನ್ ಹಗರಣ ತಂತ್ರಜ್ಞಾನ
ಅವಲಂಬಿಸಿರುವ 'ಬಿಳಿಕಾಲರ್ ಅಪರಾಧ'.ಇದಕ್ಕೆ ಸಂಬಂಧಿಸಿದ ಖಾತೆಗಳ ಪಾಸ್ ವರ್ಡ್ ಸೇರಿದಂತೆ ಬಹಳಷ್ಟು ಮಾಹಿತಿಗಳು ಶ್ರೀಕಿಯ ನೆನಪಲ್ಲಿ ಮಾತ್ರ ಇದೆ,
ಲಿಖಿತ ದಾಖಲೆಗಳಿಲ್ಲ
ಎಂದು ಹೇಳಲಾಗಿದೆ.ಈ ಹಿನ್ನೆಲೆಯಲ್ಲಿ ಶ್ರೀಕಿಯ ಪ್ರಾಣಕ್ಕೆ ಅಪಾಯದ ಸಾಧ್ಯತೆ ಇದೆ.#Bitcoin
5/5— Siddaramaiah (@siddaramaiah) November 15, 2021