ಲಖನೌ: ಶ್ರೀರಾಮನ ಜನ್ಮಸ್ಥಾನದಲ್ಲೇ ಭವ್ಯ ಶ್ರೀರಾಮ ಮಂದಿರ ನಿರ್ಮಾಣವಾಗಿದ್ದು ದೇಗುಲ ಲೋಕಾರ್ಪಣೆಗೆ ಅಂತಿಮ ತಯಾರಿ ಸಾಗಿದೆ. ಅದಾಗಲೇ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಉಗ್ರರ ಕರಿ ನೆರಳು ಆವರಿಸಿದೆಯೇ ಎಂಬ ಆತಂಕ ಎದುರಾಗಿದೆ.
ಭಯೋತ್ಪಾದಕ ನಿಗ್ರಹ ದಳ ಕ್ಷಿಪ್ರ ಕಾರ್ಯಾಚಣೆ ನಡೆಸಿ ಮೂವರು ಶಂಕಿತರನ್ನು ಬಂದ್ಜಿಸಿದೆ. ಅಯೋಧ್ಯೆ ಜಿಲ್ಲೆಯಲ್ಲಿ ಬಿಗಿ ಭದ್ರತೆಯ ನಡುವೆ ವಾಹನಗಳ ತಪಾಸಣೆ ನಡೆಯುತ್ತಿದೆ. ಉತ್ತರ ಪ್ರದೇಶ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದೆ ಎಂದು ವಿಶೇಷ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ. ಈ ಶಂಕಿತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬಂಧಿತರಿಗೆ ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಇರುವುದು ಗೊತ್ತಾಗಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದವರು ತಿಳಿಸಿದ್ದಾರೆ.
























































