ತಿರುಮಲ: ದಕ್ಷಿಣ ಭಾರತದ ಪುಣ್ಯಕ್ಷೇತ್ರ ತಿರುಪತಿ ದೇವಾಲಯದಲ್ಲಿ ಹಿಂದೂಗಳನ್ನು ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳುವ ಸಂಬಂಧ ಆಂಧ್ರಪ್ರದೇಶ ಸರ್ಕಾರ ತೀರ್ಮಾನ ಕೈಗೊಂಡಿದೆ.
ಈ ಕುರಿತಂತೆ ಶುಕ್ರವಾರ ಮಾಹಿತಿ ಹಂಚಿಕೊಂಡಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತಿರುಮಲದ ವೆಂಕಟೇಶ್ವರ ದೇವಾಲಯದಲ್ಲಿ ಹಿಂದೂಗಳನ್ನು ಮಾತ್ರ ಕೆಲಸಕ್ಕೆ ನೇಮಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಪ್ರಸಕ್ತ ಇತರ ಸಮುದಾಯದ ವ್ಯಕ್ತಿಗಳೂ ಸೇವೆ ಸಲ್ಲಿಸುತ್ತಿದ್ದು ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ. ದೇಶಾದ್ಯಂತ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲೂ ವೆಂಕಟೇಶ್ವರ ಸ್ವಾಮಿ ದೇವಾಲಯ ನಿರ್ಮಿಸಲಾಗುವುದು ಎಂದವರು ತಿಳಿಸಿದರು.