ಹೈದರಾಬಾದ್: ದೇಶದಲ್ಲಿ ಆಮ್ಲಜನಕ ಕೊರತೆಯಿಂದ ಕೋವಿಡ್ ರೋಗಿಗಳು ಸಾವನ್ಬಪ್ಪುತ್ತಿರುವ ದುರಂತಗಳು ಮರುಕಲಿಸುತ್ತಲೇ ಇವೆ. ತಿರುಪತಿ ಬಳಿ ಆಸ್ಪತ್ರೆಯಲ್ಲಿ ಸಕಾಲದಲ್ಲಿ ಆಕ್ಸಿಜನ್ ಪೂರೈಕೆಯಾಗದೆ 11 ಮಂದಿ ಕೊರೋನಾ ಸೋಂಕಿತರು ಮೃತಪಟ್ಟಿರುವ ಘಟನೆ ಸಂಭವಿಸಿದೆ.
ತಿರುಪತಿಯ ಎಸ್ ವಿ ಆರ್ ರೂಯಿಯಾ ಸರ್ಕಾರಿ ಆಸ್ಪತ್ರೆ ಈ ದಾರುಣ ಘಟನೆಗೆ ಸಾಕ್ಷಿಯಾಗಿದೆ. ಚೆನ್ನೈ ನಿಂದ ಬರಬೇಕಿದ್ದ ಆಕ್ಸಿಜನ್ ಟ್ಯಾಂಕರ್ ತಲುಪುವಲ್ಲಿ ವಿಳಂಬವಾಗಿದ್ದರಿಂದ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ.
ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಕೇವಲ 5 ನಿಮಿಷಗಳ ಅಂತರದಲ್ಲಿ 11 ಮಂದಿಯ ಸಾವನ್ನಪ್ಪಿದ್ದಾರೆನ್ನಲಾಗಿದೆ.