ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಕ್ಸೆಪಾರ್ಹ ಪದಬಳಕೆ ಮಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಬಿಜೆಪಿ ಶಾಸಕ ಸಿ.ಟಿ.ರವಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್ ಆದೇಶಿಸಿದೆ.
ಈ ಸಂದರ್ಭದಲ್ಲಿ ಕೋರ್ಟ್ ಆವರಣದಲ್ಲಿ ಮಾತನಾಡಿದ ಶಾಸಕ ಸಿ.ಟಿ.ರವಿ, ಪೊಲೀಸರು ತಮ್ಮನ್ನು ಯಾವುದೇ ನೋಟಿಸ್ ನೀಡದೇ ಅಕ್ರಮವಾಗಿ ಬಂಧನದಲ್ಲಿಟ್ಟಿದ್ದಾರೆ. ರಾತ್ರಿಯಿಡೀ ಬಂಧನದಲ್ಲಿಟ್ಟು ಸರ್ವಾಧಿಕಾರ ಮೆರೆದಿದ್ದಾರೆ ಎಂದು ದೂರಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರವು ಪೊಲೀಸರನ್ನು ದರ್ಬಳಕೆ ಮಾಡಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಿ.ಟಿ.ರವಿ, ಇಂತಹಾ ಸರ್ವಾಧಿಕಾರ ಬಹಳ ದಿನ ನಡೆಯಲ್ಲ, ಎಲ್ಲದಕ್ಕೂ ಕೊನೆಯಿರುತ್ತೆ. ನಮಗೂ ಕಾಲ ಬರುತ್ತೆ ಎಂದರು