ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋವಿಂಗ್ ಸಿಬ್ಬಂದಿಯಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಗೃಹಸಚಿವ ಅರಗ ಜ್ಞಾನೇಂದ್ರ ಕ್ರಮಕ್ಕೆ ಮುಂದಾಗಿದ್ದಾರೆ.
ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಾ ಪಂಥ್ ಹಾಗೂ ಹೆಚ್ಚುವರಿ ಆಯುಕ್ಗ ರವಿಕಾಂತೇಗೌಡರ ಜೊತೆ ಸಭೆ ನಡೆಸಿ ಇನ್ನು ಮುಂದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.
ಯಾವುದೇ ವಾಹವನವನ್ನು ಟೋವಿಂಗ್ ಮಾಡುವ ಮುನ್ನ ಟ್ರಾಫಿಕ್ ಪೊಲೀಸರು ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು ಹಾಗೂ ವಾಹನ ಟೋವಿಂಗ್ ಮಾಡಬೇಕಾದ ಸಂಧರ್ಭದಲ್ಲಿ ತೆಗೆಳುಕೊಳ್ಳಬೇಕಾದ ಎಲ್ಲಾ ನಿಯಾಮಾವಳಿಗಳನ್ನು ತಪ್ಪದೆ ಅನುಸರಿಸಬೇಕು ಎಂದು ಸೂಚಿಸಿದ್ದಾರೆ.
ಇನ್ನು ಮುಂದೆ ಯಾವುದೇ ಸಂಧರ್ಭದಲ್ಲಿ ಟ್ರಾಫಿಕ್ ಪೊಲೀಸರು ವಾಹನವನ್ನು ಹೊತ್ತೊಯ್ಯುವ ಸಮಯದಲ್ಲಿ ವಾಹನದ ಮಾಲೀಕರು ಸ್ಥಳದಲ್ಲಿದ್ದರೆ ಕೇವಲ ‘ನೋ ಪಾರ್ಕಿಂಗ್’ ಶುಲ್ಕದ ಹಣವನ್ನು ಮಾತ್ರ ಪಡೆದುಕೊಳ್ಳಬೇಕು ಹಾಗೂ ವಾಹನವನ್ನು ಅಲ್ಲಿಯೇ ಅವರಿಗೆ ಬಿಟ್ಟು ಕೊಡಬೇಕು. ಟೋವಿಂಗ್ ಮಾಡಬಾರದು ಎಂದು ಸೂಚಿಸಿದ್ದಾರೆ.
ಟೋವಿಂಗ್ ಸಿಬ್ಬಂದಿ ಸಾರ್ವಜನಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಹಾಗೂ ಟೋವಿಂಗ್ ಮಾಡಲಾಗುವ ವಾಹನಗಳನ್ನು ಅತ್ಯಂತ ಜಾಗರೂಕತೆಯಿಂದ ಯಾವುದೇ ಹಾನಿಗೊಳಗಾಗದಂತೆಯೂ ನೋಡಿಕೊಳ್ಳಬೇಕು ಎಂದೂ ಹೇಳಿದ್ದಾರೆ.
ಇದನ್ನೂ ಓದಿ.. ಹೆಚ್ಚು ಶುಲ್ಕ ವಸೂಲಿ ಮಾಡಿದರೆ ಜೋಕೆ.. ಶಿಕ್ಷಣ ಸಂಸ್ಥೆಗಳಿಗೆ ಶಿಸ್ತು ಕ್ರಮದ ಎಚ್ಚರಿಕೆ
ಹೆಚ್ಚು ಶುಲ್ಕ ವಸೂಲಿ ಮಾಡಿದರೆ ಜೋಕೆ.. ಶಿಕ್ಷಣ ಸಂಸ್ಥೆಗಳಿಗೆ ಶಿಸ್ತು ಕ್ರಮದ ಎಚ್ಚರಿಕೆ
















































































