ಬೆಂಗಳೂರು: ನಾಪತ್ತಯಾಗಿದ್ದ ಸುವರ್ಣ ತ್ರಿಭುಜ ಬೋಟ್ ಬಗ್ಗೆ ತಿಖೆ ನಡೆದಿದ್ದು, ನಾಪತ್ತೆಯಾಗಿರುವ ಮೀನುಗಾರರ ಕುಟುಂಬದವರಿಗೆ ಪರಿಹಾರ ನೀಡಬೇಕೆಂಬ ಆಗ್ರಹಕ್ಕೆ ಸರ್ಕಾರ ಸ್ಪಂಧಿಸಿದೆ. ಮೀನುಗಾರರ ಕುಟುಂಬದವರಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗಿದೆ.
ಬೆಂಗಳೂರಿನ ವಿಧಾನಸೌಧದದಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ “ಸುವರ್ಣ ತ್ರಿಭುಜ” ಬೋಟ್ ನಲ್ಲಿದ್ದ 7 ಜನ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚೆಕ್ವಿ ವಿತರಿಸಿದರು.
ಕಳೆದ 2018ರ ಡಿಸೆಂಬರ್ ತಿಂಗಳಲ್ಲಿ ಉಡುಪಿಯ ಮಲ್ಪೆ ಬಂದರಿನಿಂದ ಮಾಲಕರ ಸಹಿತ ಏಳು ಜನ ಮೀನುಗಾರರಿದ್ದ ‘ಸುವರ್ಣ ತ್ರಿಭುಜ’ ಬೋಟ್ ಮರಳಿ ವಾಪಸ್ ಬಾರದೆ ನಾಪತ್ತೆಯಾಗಿತ್ತು. ಉನ್ನತಮಟ್ಟದಲ್ಲಿ ಪ್ರಯತ್ನಿಸಿ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿರುವ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲಾಗಿತ್ತು. ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್ ನಲ್ಲಿದ್ದ 7 ಜನ ಮೀನುಗಾರರ ಕುಟುಂಬ ಅವರನ್ನೇ ಅವಲಂಬಿಸಿರುವುದರಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಇವರ ಕುಟುಂಬಕ್ಕೆ ಸರ್ಕಾರ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ನೀಡಲಾಯಿತು.