ಬೆಂಗಳೂರು: ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ತುಮಕೂರಿನಲ್ಲಿ ಸ್ಮಾರ್ಟ್ ಸಿಟಿ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿದರು.
ಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್, ತುಮಕೂರು ಮಹಾನಗರ ಪಾಲಿಕೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ತುಮಕೂರು ನಗರದಲ್ಲಿ ನಡೆದಿರುವ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕಾಮಗಾರಿಗಳು ತ್ವರಿತ ಗತಿಯಲ್ಲಿ ಸಾಗಬೇಕು, ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ಕಳಪೆ ಆಗಬಾರದು ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಅವರು ತಾಕೀತು ಮಾಡಿದರು.