ಕೋಲಾರ: ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿದ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಗೆನ್ನೆರಹಳ್ಳಿ ಗೇಟ್ ಸಮೀಪ ನಡೆದಿದೆ.
ಮೃತರನ್ನು ಕೆಜಿಎಫ್ ನಗರದ ನಿವಾಸಿಗಳಾದ ವಿನಯ್ ಹಾಗೂ ವಿನಾಯಕ್ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ಸಂಬಂಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.






































































