ದೆಹಲಿ: ಕರಾವಳಿ ಮಲೆನಾಡಲ್ಲಿ ಬಿರುಗಾಳಿ ಮಳೆಯ ಹೊಡೆತಕ್ಕೆ ಜನ ತತ್ತರಿಸಿದ್ದಾರೆ. ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಿದ್ದಾರೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.
ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಸಂಭವವಿರುವ ಹಿನ್ನಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಬೆ ನಡೆಸಿ ಮಾಹಿತಿ ಪಡೆದರು.
ತಮ್ಮ ದೆಹಲಿಯ ಕಚೇರಿ ಕೃಷಿ ಭವನಕ್ಕೆ ತೆರಳಿ ವಿಡಿಯೋ ಕಾನ್ಫೆರನ್ಸ್ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶೋಭಾ ಕರಂದ್ಲಾಜೆ, ಮಳೆಯಿಂದಾಗಲಿರುವ ಪೃಕತಿ ವಿಕೋಪಗಳ ಕುರಿತು, ಜಿಲ್ಲೆಯಲ್ಲಿನ ಕೋವಿಡ್ ನಿರ್ವಹಣೆ, ಮೂರನೇ ಅಲೆಗೆ ಜಿಲ್ಲೆ ನಡೆಸಿರುವ ತಯಾರಿಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಚರ್ಚಿಸಿ ಮಾಹಿತಿ ಪಡೆದರು.
ಕ್ಷಣ ಕ್ಷಣದ ಮಾಹಿತಿ ನೀಡುವಂತೆ ಸೂಚಿಸಿದ್ದು, ಜನರ ಕಷ್ಟ ನಷ್ಟಗಳಿಗೆ ಧಾವಿಸುವ ಸಂದರ್ಭ ಒದಗಿಬಂದರೆ ಸೂಕ್ತ ವ್ಯವಸ್ಥೆ ಹೊಂದಿಸಿಕೊಳ್ಳುವಂತೆ ಶೋಭಾ ಅವರು ಅಧಿಕಾರಿಗಳಿಗೆ ಸೂಚಿಸಿದರು.