ಉಡುಪಿ: ದೇವಳ ನಗರಿ ಉಡುಪಿಯ ಬಿಜೆಪಿ ಕಾರ್ಯಕರ್ತರು ಇಂದು ಎಂದಿಲ್ಲದ ಸಂಭ್ರಮದಲ್ಲಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ ಅವರ ಅಭಿವೃದ್ಧಿ ಪರಿಕಲ್ಪನೆಯ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅಸ್ತು ಅಂದಿದ್ದಲ್ಲದೆ, ಹಿಂದೆಂದೂ ಸಿಗದಷ್ಟು ಅನುದಾನ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಿಕ್ಕಿದೆ.
ಏನಿದು ಅನುದಾದ ಹೊಳೆ..?
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಗಳ ಸರ್ವತೋಮುಖ ಅಭಿವೃದ್ಧಿಗೆ, 2021-22 ನೇ ಆರ್ಥಿಕ ವರ್ಷದಲ್ಲಿ ಒಟ್ಟು 369.00 ಕೋಟಿ ರೂಪಾಯಿ ಕೇಂದ್ರ ಸರಕಾರದಿಂದ ಮಂಜೂರಾಗಿದೆ.
2021-22ನೇ ಆರ್ಥಿಕ ವರ್ಷದಲ್ಲಿಉಡುಪಿ-ಚಿಕ್ಕಮಗಳೂರು ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ 169Aಯ ಹೆಬ್ರಿ-ಪರ್ಕಳ ರಸ್ತೆ, ಕರಾವಳಿ ಜಂಕ್ಷನ್-ಮಲ್ಪೆ ಸಂಪರ್ಕಿಸುವ ರಸ್ತೆಗಳನ್ನು ಚತುಷ್ಪಥೀಕರಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗೆ ಹಾಗೂ ಒಟ್ಟು 29.1 ಕಿ ಮೀ ಉದ್ದದ ಕಾಮಗರಿಗಳಿಗೆ ಭೂ ಸಾರಿಗೆ ಸಚಿವಾಲಯ ಅಂದಾಜು ಮೊತ್ತ 350.00 ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಿ ಕಾಮಗಾರಿಗಳಿಗೆ ಅನುಮೋದನೆ ನೀಡಿದೆ.
ಶೋಭಾ ಕರಂದ್ಲಾಜೆ ಅವರ ಸತತ ಪ್ರಯತ್ನದ ಫಲವಾಗಿ, ರಾಷ್ಟ್ರೀಯ ಹೆದ್ದಾರಿ 169A ಸೀತಾನದಿ ಬಳಿಯಲ್ಲಿ ಮಳೆಗಾಲದ ಸಮಯದಲ್ಲಿ ಉಂಟಾಗುವ ತೊಂದರೆಗಳನ್ನು ಸರಿಪಡಿಸುವ ಯೋಜನೆಗೆ ಮೋದಿ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ತಡೆಗೋಡೆ ನಿರ್ಮಾಣ, ರಸ್ತೆ ಎತ್ತರಿಸುವುದು ಮತ್ತು ರಾಷ್ಟ್ರೀಯ ಹೆದ್ದಾರಿ 169ರ ನೆಮ್ಮಾರು ಬಳಿ ರಸ್ತೆ ಎತ್ತರಿಸಿ ತಡೆಗೋಡೆಯನ್ನು ನಿರ್ಮಿಸುವ ಅಂದಾಜು ಮೊತ್ತ 19.00 ಕೋಟಿ ರೂಪಾಯಿಗಳ ಕಾಮಗಾರಿಗೆ ಕೇಂದ್ರ ಭೂ ಸಾರಿಗೆ ಸಚಿವಾಲಯ ಕೂಡಾ ಅನುಮೋದನೆ ನೀಡಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸಂಸದೆ ಶೋಭಾ ಕರಂದ್ಲಾಜೆ, ದೇಶ ಕೋವಿಡ್ ಸೋಂಕಿನ ಸಂಕಷ್ಟದಲ್ಲಿ ಇರುವ ಸಂದರ್ಭದಲ್ಲೂ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಆದ್ಯತೆ ನೀಡಿ ರೂಪಾಯಿ 369.00 ಕೋಟಿಗಳ ಕಾಮಗಾರಿಗಳಿಗೆ ಅನುಮೋದನೆ ನೀಡಿದೆ ಎಂದಿದ್ದಾರೆ. ಈ ಯೋಜನೆಗಳಿಗೆ ಹಸಿರು ನಿಶಾನೆ ತೋರಿರಯವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರಕ್ಕೆ ಹಾಗೂ ವಿಶೇಷವಾಗಿ ಕೇಂದ್ರ ಭೂ ಸಾರಿಗೆ ಸಚಿವರಾದ ಶ್ರೀ ನಿತಿನ್ ಗಡ್ಕರಿಯವರಿಗೆ ಸಂಸದೆ ಶೋಭಾ ಕರಂದ್ಲಾಜೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.