ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಈ ಬಾರಿ ಬಿಜೆಪಿಯಿಂದ ಕಸಿದುಕೊಳ್ಳಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ. ಬಹುಪಾಲು ಮುಸ್ಲಿಂ ಮತಗಳಿರುವ ಈ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಲರ ಮತಗಳನ್ನು ಪರಿಪೂರ್ಣವಾಗಿ ಪಡೆದುಕೊಳ್ಳಲು ಕೆಪಿಸಿಸಿ ನಾಯಕರೂ ಆದ ಜಿ.ಎ.ಬಾವಾ ಕಸರತ್ತು ನಡೆಸುತ್ತಿದ್ದಾರೆ.
ಇದೇ ಸಂದರ್ಭದಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಹುರಿಯಾಳಾಗಿರುವ ಗೀತಾ ಶಿವರಾಜ್ ಕುಮಾರ್, ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರ ಜೊತೆ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪತಿ ನಟ ಶಿವರಾಜ್ ಕುಮಾರ್, ಕಾಂಗ್ರೆಸ್ ಪಕ್ಷದ ಚುನಾವಣಾ ಉಸ್ತುವಾರಿ ಜಿ.ಎ.ಬಾವಾ ಸೇರಿದಂತೆ ಅನೇಕನಾಯಕರು ಉಪಸ್ಥಿತರಿದ್ದು, ಗೀತಾ ಶಿವರಾಜ್ ಕುಮಾರ್ ಗೆಲುವಿಗೆ ಪ್ರಾರ್ಥಿಸಿದರು.
ಈ ನಡುವೆ, ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಅಲ್ಪಸಂಖ್ಯಾತ ಸಮುದಾಯದ ಮುಖಂಡರಾದ ಜಿ.ಎ.ಬಾವಾ ಅವರು ಕಾರ್ಯತಂತ್ರ ರೂಪಿಸುತ್ತಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿಯಾಗಿರುವ ಜಿ.ಎ.ಭಾವಾ ಅವರು ಅಲ್ಪಸಂಖ್ಯಾತ ಸಮುದಾಯಗಳ ನಾಯಕರ ಜೊತೆ ಸರಣಿ ಸಭೆ ನಡೆಸಿದರು. ಈ ಬಾರಿ ಅಲ್ಪಸಂಖ್ಯಾತರ ಮತಗಳು ಹೆಚ್ಚಿನ ಸಂಖ್ಯೆಯಲ್ಲಿ ಚಲಾವಣೆಯಾಗುವ ನಿಟ್ಟಿನಲ್ಲಿ ಜೆಲಸ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಜಿ.ಎ.ಬಾವಾ ಮಾರ್ಗದರ್ಶನ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರವಾಗಿ ಪ್ರಚಾರ ಆರಂಭಿಸಿರುವ ಕಾಂಗ್ರೆಸ್ ನಾಯಕರು ಸರಣಿ ಸಭೆಗಳನ್ನು ನಡೆಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮುಸ್ಲಿಮರು ಹೆಚ್ಚಿನ ಪ್ರಮಾಣದಲ್ಲಿ ಮತಗಳನ್ನು ಚಲಾಯಿಸಿದರೆ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಸಾಧ್ಯವಿದೆ ಎಂದು ಜಿ.ಎ.ಬಾವಾ ಪ್ರತಿಪಾದಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮ ಜೊತೆ ಮಾತನಾಡಿದ ಜಿ.ಎ.ಬಾವಾ, ಈ ಬಾರಿ ಕರಾವಳಿ-ಮಲೆನಾಡಿನ ಜಿಲ್ಕೆಗಳಲ್ಲಿ ಅಚ್ಚರಿಯ ಫಲಿತಾಂಶ ಬರಲಿದೆ ಎಂದರು. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಜನರ ಒಲವು ವ್ಯಕ್ತವಾಗುತ್ತಿದೆ ಎಂದು ಅವರು ವಿಶ್ಲೇಷಿಸಿದರು.


















































