ಉಡುಪಿ: ಸುಮಾರು 21 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅಮಾಸೆಬೈಲು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ 2004ರಲ್ಲಿ ದಾಖಲಾದ ಪ್ರಕರಣದಲ್ಲಿ ಆರೋಪಿ ಕಾಸರಗೋಡು ಜಿಲ್ಲೆ ಮೊಗ್ರಾಲು ಪುತ್ತೂರು ನಿವಾಸಿ ಫಾರೂಕ್ ಎಂಬಾತ 2004ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು. ತಲೆಮರೆಸಿಕೊಂಡಿದ್ದ ಈತನನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಕುಂದಾಪುರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ, ಪೊಲೀಸ್ ವೃತ್ತ ನಿರೀಕ್ಷಕ ಜಯರಾಮ ಗೌಡ ಅವರ ನಿರ್ದೇಶನದಂತೆ ಪೊಲೀಸ್ ಉಪ ನಿರೀಕಕರಾದ ಅಶೋಕ್ ಕುಮಾರ್ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ.





































































