ಉಡುಪಿ : ದೇವಳ ನಗರಿ ಸಮೀಪದ ಸಾಸ್ತಾನದಲ್ಲಿ ವಿಜಯನಗರ ದೊರೆ ಇಮ್ಮಡಿ ದೇವರಾಯನ ಶಾಸನ ಪತ್ತೆಯಾಗಿದೆ. ಸಾಸ್ತಾನದ ಪಾಂಡೇಶ್ವರ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆಂಕಬೆಟ್ಟು ಎಂಬಲ್ಲಿಯ ಶ್ರೀನಿವಾಸ ಭಟ್ ಅವರ ಮನೆಯ ಹಿಂಭಾಗದ ಬಾವಿಯ ಸಮೀಪದಲ್ಲಿ ಶಾಸನ ಪತ್ತೆಯಾಗಿದೆ. 14 ನೇ ಶತಮಾನದ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ವಿದ್ವಾಂಸರಾದ ಡಾ| ಎಸ್.ಜಿ. ಸಾಮಕ್ ಅವರು ಪತ್ತೆ ಮಾಡಿದ್ದು, ಇದನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿದ್ದಾರೆ.
ವಿಜಯನಗರವನ್ನು ಶ್ರೀ ವೀರ ಪ್ರತಾಪ ದೇವರಾಯ ಆಳ್ವಿಕೆ ಮಾಡುತ್ತಿರುವ ಕಾಲದಲ್ಲಿ ಬಾರಕೂರನ್ನು ಅಂಣಪ್ಪ ಒಡೆಯ ಪ್ರತಿಪಾಲಿಸುತ್ತಿರುವಾಗ ಬ್ರಾಹ್ಮಣರಿಗೆ ದಾನವನ್ನು ನೀಡಿರುವ ಮಾಹಿತಿಯನ್ನು ಈ ಶಾಸನವು ತಿಳಿಸುತ್ತದೆ. ಶಾಸನದ ಕೊನೆಯಲ್ಲಿ ಶಾಪಾಶಯ ವಾಕ್ಯದ ಕೆಲವೊಂದು ಪದಗಳು ತಿಳಿಯುತ್ತದೆ.