ಬೆಳಗಾವಿ: ಇಂದು ನಿಧನರಾದ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಮೇಶ್ ಕತ್ತಿ ಅವರ ಅಂತಿಮ ದರ್ಶನ ಪಡೆದು, ಕತ್ತಿ ಅವರ ಧರ್ಮಪತ್ನಿಯವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರ ಮಾಡಿದರು.
ಇದಕ್ಕೂ ಮುನ್ನ, ಕೇಂದ್ರ, ರಾಜ್ಯ ಸಚಿವರು, ಬಿಜೆಪಿ ನಾಯಕರು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಮುಖಂಡರು, ಗಣ್ಯರು ಉಮೇಶ್ ಕತ್ತಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai, ರಾಜ್ಯಾಧ್ಯಕ್ಷರಾದ ಶ್ರೀ @nalinkateel, ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ @BSYBJP ಸೇರಿದಂತೆ ಸಚಿವರು, ಶಾಸಕರು ಇಂದು ಬೆಳಗಾವಿಯ ಬೆಲ್ಲದ ಬಾಗೇವಾಡಿಯಲ್ಲಿ ಸಚಿವರಾದ ಶ್ರೀ ಉಮೇಶ್ ಕತ್ತಿಯವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು. pic.twitter.com/qQbyJku7VK
— BJP Karnataka (@BJP4Karnataka) September 7, 2022





















































