ಬೆಂಗಳೂರು: ಒಂದಿಲ್ಲೊಂದು ವಿಚಾರಗಳಿಂದ ಸುದ್ದಿಗೆ ಗ್ರಾಸವಾಗುತ್ತಿರುವ ಸಚಿವ ಉಮೇಶ್ ಕತ್ತಿ ಇದೀಗ ತನ್ನ ಬಾಲಿಶ ಹೇಳಿಕೆಯಿಂದಾಗಿ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಸಂಕಷ್ಟದ ಪರಿಸ್ಥಿತಿಯನ್ನು ಹೇಳಿಕೊಂಡ ರೈತರೊಬ್ಬರನ್ನು ಸಾಯಲು ಸಚಿವ ಕತ್ತಿ ಹೇಳಿದ್ದಾರೆಂಬ ವಿಚಾರ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿದೆ.
ಸಚಿವರ ಹೇಳಿಕೆಯನ್ನು ಖಂಡಸಿರುವ ಪ್ರತಿಪಕ್ಷಗಳು ಉಮೇಶ್ ಕತ್ತಿ ತಲೆದಂಡಕ್ಕೆ ಪಟ್ಟು ಹಿಡಿದಿವೆ. ಈ ಕುರಿತಂತೆ ಟ್ವೀಟ್ ಮಾಡಿರುವ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಚಿವ ಉಮೇಶ್ ಕತ್ತಿ ಅವರನ್ನ ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಕೊರೋನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ಮಾನಸಿಕ ವಿಕೃತಿ ಮೆರೆದಿದ್ದಾರೆ.ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ ಎಂದು ಹೆಚ್ಡಿಕೆ ಟ್ವೀಟ್ ಮಾಡಿದ್ದಾರೆ.
ಕೊರೋನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ಮಾನಸಿಕ ವಿಕೃತಿ ಮೆರೆದಿದ್ದಾರೆ.
ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ.
1/2— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 28, 2021
ಕತ್ತಿ ಹಾಎಳಿಕೆಯನ್ಬು ಖಂಡಿಸಿರುವ ಹೆಚ್ಡಿಕೆ, ಜನಸಾಮಾನ್ಯರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ಇಂತಹ ಸಚಿವರನ್ನು ಸಂಪುಟದಿಂದ ಕಿತ್ತೊಗೆಯುವಂತೆ ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.
ಇದನ್ನು ತೀವ್ರವಾಗಿ ಖಂಡಿಸುವೆ. ಜನಸಾಮಾನ್ಯರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ಇಂತಹ ಸಚಿವರನ್ನು ಸಂಪುಟದಿಂದ ಕಿತ್ತೊಗೆಯುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತೇನೆ.
2/2— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 28, 2021