ಮಂಗಳೂರು: 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ. ಚಿತ್ರನಟ ಪ್ರಕಾಶ್ ರಾಜ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆಗೈದ 70 ಮಂದಿ ಗಣ್ಯರು ಈ ಬಾರಿಗೆ ಗೌರವಕ್ಕೆ ಭಾಜನರಾಗಿದ್ದಾರೆ.
ಇದೇ ವೇಳೆ, ಪುರಾಣ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಹಾಗೂ ಇತರ ಪ್ರಮುಖ ದೈವಸ್ಥಾನಗಳಲ್ಲಿ ದೈವ ಚಾಕರಿಯನ್ನು ನಿಷ್ಠೆಯಿಂದ ಮಾಡಿಕೊಂಡು ಬಂದಿರುವಂತಹ ಉಮೇಶ್ ಪಂಬದ ಗಂಧಕಾಡು ಅವರೂ ಈ ಬಾರಿಯ ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್, ಉಮೇಶ್ ಪಂಬದ ಗಂಧಕಾಡು ಅವರು ಈ ಬಾರಿಯ ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಹಾಗೂ ಇತರ ಪ್ರಮುಖ ದೈವಸ್ಥಾನಗಳಲ್ಲಿ ದೈವ ಚಾಕರಿಯನ್ನು ನಿಷ್ಠೆಯಿಂದ ಮಾಡಿಕೊಂಡು ಬಂದಿರುವಂತಹ ಶ್ರೀ ಉಮೇಶ್ ಪಂಬದ ಗಂಧಕಾಡು ಇವರಿಗೆ ಈ ಬಾರಿಯ ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಅಭಿನಂದನೆಗಳು. pic.twitter.com/Iu0X0u3f8i
— Rajesh Naik U (@URajeshNaik) October 30, 2025
 
	    	



















































