ದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಮ್ ಸಿಂಗ್ ಯಾದವ್ ಅವರ ಕಿರಿಯ ಸೊಸೆ ಅಪರ್ಣ ಯಾದವ್ ಅವರು ಇಂದು ದೆಹಲಿಯಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಇತರ ಹಿರಿಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಅವರು ಸೇರ್ಪಡೆಗೊಂಡರು.
ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ, ಜನಪರ ಆಡಳಿತ ಹಾಗೂ ಬಿಜೆಪಿಯ ಸಿದ್ದಾಂತಗಳಿಂದ ಪ್ರಭಾವಿತರಾಗಿ ಬಿಜೆಪಿಯ ಸದಸ್ಯತ್ವನ್ನು ಸ್ವೀಕರಿಸಿರುವ ಅಪರ್ಣ ಯಾದವ್ ಅವರಿಗೆ ಸಚಿವೆ ಶೋಭಾ ಕರಂದ್ಲಾಜೆಯವರು ಪಕ್ಷಕ್ಕೆ ಹಾರ್ದಿಕ ಸ್ವಾಗತ ಕೋರಿದ್ದಾರೆ.
ಉತ್ತರ ಪ್ರದೇಶದ ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅವರ ಉತ್ಸಾಹ-ಹುಮ್ಮಸ್ಸು ಉತ್ತರಪ್ರದೇಶದಲ್ಲಿ ಪಕ್ಷವನ್ನು ಇನಷ್ಟು ಬಲಿಷ್ಠಗೊಳಿಸಲು ಸಹಾವಾಗಲಿದೆ ಎಂದು ಶೋಭಾ ಕರಂದ್ಲಾಜೆ ಅಭಿಪ್ರಾಯ ಪಟ್ಟಿದ್ದಾರೆ