ಬೆಂಗಳೂರು: ವಿಧಾನ ಮಂಡಲ ಅಧಿವೇಶನದದಲ್ಲಿ ಸರ್ಕಾರದ ಹಗರಣಗಳು ಪ್ರತಿಧ್ವನಿಸಿದ್ದಿ, ಆಡಳಿತ-ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯುತ್ತಿದೆ. ಮೂಡಾ ಕರ್ಮಕಾಂಡ, ವಾಲ್ಮಿಕಿ ನಿಗಮದ ಹಗರಣ ಸಹಿತ ಹಲವಾರು ಅಕ್ರಮಗಳನ್ನು ಮುಂದಿಟ್ಟು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಮಾಡುತ್ತಿವೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 18ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಬೆಂಗಳೂರಿನ ರಾಡಿಸನ್ ಬ್ಲೂ ಹೊಟೇಲ್‌ನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಪ್ರತಿಪಕ್ಷಗಳ ಸವಾಲುಗಳನ್ನು ಎದುರಿಸಲು ಕಾರ್ಯತಂತ್ರ ರೂಪಿಸಲಾಗುವುದು.
ಜುಲೈ 18ರಂದು ಸಂಜೆ 6.30ಕ್ಕೆ ನಡೆಯುವ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ಯಲ್ಲಿ ಸಿಎಲ್‌ಪಿ ನಾಯಕರೂ ಅದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಪರಿಷತ್ತಿನ ಸಭಾ ನಾಯಕ ಎನ್.ಎಸ್.ಭೋಸರಾಜು ಸಹಿ ಪಕ್ಷದ ಎಲ್ಲಾ ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ಮಾಹಿತಿ ನೀಡಿದ್ದಾರೆ.