ನವದೆಹಲಿ: ವಿವಾದಗಳಿಂದ ಭಾರೀ ಸುದ್ದಿಯ ಕೇಂದ್ರಬಿಂದುವಾಗಿದ್ದ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾತ್ಕಾಲಿಕ ಅಭ್ಯರ್ಥಿತನವನ್ನು ಯುಪಿಎಸ್‌ಸಿ ರದ್ದುಗೊಳಿಸಿದೆ.
ಅಧಿಕಾರ ದುರ್ಬಳಕೆ ಸೇರಿದಂತೆ ವಿವಿಧ ವಿವಾದಗಳಿಂದ ದೇಶಾದ್ಯಂತ ಸುದ್ದಿಯಾಗಿದ್ದ ಪೂಜಾ ಖೇಡ್ಕರ್ ಅವರ ತಾಯಿ ಕೂಡಾ ರೈತರನ್ನು ಬೆದರಿಸಿದ ಆರೋಪದಲ್ಲಿ ಇತ್ತೀಚೆಗೆ ಬಂಧನಕ್ಕೊಳಗಾಗಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಲೋಕಸೇವಾ ಆಯೋಗ,
ಮುಂದಿನ ಎಲ್ಲಾ ಪರೀಕ್ಷೆಗಳು ಅಥವಾ ಆಯ್ಕೆ ಪ್ರಕ್ರಿಯೆಗಳಿಂದ ದೂರ ಇಡಲಾಗಿದೆ ಎಂದು ಹೇಳಿದೆ. ಸಿಇಸಿ-2022 ನಿಯಮಗಳ ನಿಬಂಧನೆಗಳಿಗೆ ವಿರುದ್ಧವಾಗಿ ಅವರು ಕಾರ್ಯನಿರ್ವಹಿಸುತ್ತಿರುವುದು ಕಂಡಿಉ ಬಂದಿದೆ ಎಂದು ಯುಪಿಎಸ್‌ಸಿ ತಿಳಿಸಿದೆ.