ವಾಷಿಂಗ್ಟನ್: ಜಗತ್ತಿನ ದೊಡ್ಡಣ್ಣ ಖ್ಯಾತಿಯ ಅಮೆರಿಕಾ ಅಧ್ಯಕ್ಷರ ಚುನಾವಣೆ ಇದೀಗ ಕ್ಲೈಮ್ಯಾಕ್ಸ್ ಘಟ್ಟದಲ್ಲಿದೆ. 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ರಣರಂಗದಲ್ಲಿ ಭರ್ಜರಿ ಪೈಪೋಟಿ ನೀಡಿದ್ದ ಮಾಜಿ ಅಧ್ಯಕ್ಷ ಜೋ ಬೈಡನ್ ಅವರು ಇದೀಗ ಶಸ್ತ್ರತ್ಯಾಗ ಮಾಡಿದ್ದಾರೆ.
ಅದ್ಯಕ್ಷ ಸ್ಥಾನದ ರೇಸ್ನಲ್ಲಿರುವ ಡೊನಾಲ್ಡ್ ಟ್ರಂಪ್ ಜೊತೆಗಿನ ಸ್ಫರ್ಧೆಯಿಂದ ಹೊರಗುಳಿಯುವುದಾಗಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಘೋಷಿಸಿದ್ದಾರೆ.
ಡೆಮಾಕ್ರಟಿಕ್ ಪಕ್ಷದ ಮುಖ್ತಸ್ಥರೂ ಆಗಿರುವ ಬೈಡನ್ ಅವರು ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಡೆಲವೇರ್ನಲ್ಲಿರುವ ತಮ್ಮ ಬೀಚ್ ಹೌಸ್ನಲ್ಲಿ ವಿಶ್ರಾಂತಿಪಡೆಯುತ್ತಿದ್ದಾರೆ. ಅಲ್ಲಿಂದಲೇ ಅವರು ತಮ್ಮ ಈ ತೀರ್ಮಾನವನ್ನು ಪ್ರಕಟಿಸಿದ್ದಾರೆ. ಸಾಮಾಜಿಕ ಜಾಲತಾಣ ‘X’ ನಲ್ಲಿ ಫೋಸ್ಟ್ ಹಾಕಿರುವ ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವುದು ನನ್ನ ಜೀವನದ ದೊಡ್ಡ ಗೌರವವಾಗಿದೆ ಎಂದೂ ಬರೆದುಕೊಂಡಿದ್ದಾರೆ.