ಬೆಂಗಳೂರು: ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ಹಿರಿಯ ಶಾಸಕ ಯು.ಟಿ. ಖಾದರ್ ಆಉ್ಕೆಯಾಗಿದ್ದಾರೆ.
ವಿಧಾನಸಭೆಯಲ್ಲಿಂದು ನಡೆದ ಸ್ಪೀಕರ್ ಆಯ್ಕೆ ಪ್ರಕ್ರಿಯೆ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯು.ಟಿ.ಖಾದರ್ ಹೆಸರನ್ನು ಪ್ರಸ್ತಾಪಿಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನುಮೋದಿಸಿದರು. ಪ್ರತಿಪಕ್ಷಗಳಿಂದ ಯಾರೂ ಸ್ಪರ್ಧಿಗಳು ಇಲ್ಕದಿದ್ದುದರಿಂದ ಕಾಂಗ್ರೆಸ್ ಪಕ್ಷದ ಶಾಸಕ ಯು.ಟಿ.ಖಾದರ್ ಅವರು ಆಯ್ಕೆಯಾದರು.
ಕರ್ನಾಟಕ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಯುಟಿ ಖಾದರ್ ಯಲರು ಆಯ್ಕೆ,#HappyCongratulationSir 💐💐#UTkhadarSpeaker #Karnataka@utkhader @siddaramaiah @DKShivakumar @INCKarnataka pic.twitter.com/MHqOI76vKa
— @AMahmmadali (@AMahmmadali) May 24, 2023
ಹಂಗಾಮಿ ಸ್ಪೀಕರ್ ದೇಶಪಾಂಡೆ ಅವರು ಯುಟಿ.ಖಾದರ್ ಅವರನ್ನು ವಿಧಾನಸಭಾಧ್ಯಕ್ಷರನ್ನಾಗಿ ಘೋಷಿಸಿದ ಬಳಿಕ ಖಾದರ್ ಅವರು ಸ್ಪೀಕರ್ ಆಸನದತ್ತ ತೆರಳಿ ಅಧಿಕಾರ ವಹಿಸಿಕೊಂಡರು.
23ನೇ ಸ್ಪೀಕರ್ ಆಗಿ ಆಯ್ಕೆಯಾದ ಯು.ಟಿ. ಖಾದರ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ

























































