ದಾವಣಗೆರೆ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕೂಡಾ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಒತ್ತಾಯಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರವಿಂದ್ ಬೆಲ್ಲದ್, ರಾಜ್ಯ ಸರ್ಕಾರದ ವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಅದರಲ್ಲೂ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂಪಾಯಿ ಭ್ರಷ್ಟಾಚಾರದ ಬಗ್ಗೆ ಮುಖ್ಯಮಂತ್ರಿ ಅವರೂ ನೈತಿಕ ಹೊಣೆ ಹೊರಬೇಕಿದೆ ಎಂದರು. ಸಿಎಂ ಸಿದ್ದರಾಮಯ್ಯ ಕೂಡಾ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ವಾಲ್ಮಿಕಿ ಅಭಿವದ್ದಿ ನಿಗಮದ ಹಣ ವಿವಿಧ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣಕಾಸು ಇಲಾಖೆಯ ಒಪ್ಪಿಗೆ ಇಲ್ಲದೇ ಹೊಸ ಖಾತೆಗಳನ್ನು ತೆರೆದು ಹಣ ವರ್ಗಾವಣೆಯಾಗಿದೆ ಎಂದ ಬೆಲ್ಲದ್, ಹಣಕಾಸು ಇಲಾಖೆ ಸಿಎಂ ಬಳಿಯೇ ಇದ್ದು ಹಗರಣದ ಹೊಣೆಯನ್ನು ಸಿಎಂ ಕೂಡಾ ಹೊರಬೇಕಿದೆ. ಹಾಗಾಗಿ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.