ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನಿಲುವು ವಿರುದ್ಧ ಬಿಜೆಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ಮಾಡುವುದನ್ನೇ ಕಾಯಕವಾಗಿರಿಸಿಕೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಬಿಜೆಪಿ ಶಾಸಕರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು






















































