ಬೆಂಗಳೂರು: ವಾಲ್ಮಿಕಿ ನಿಗಮ ಹಗರಣ ಕುರಿತಂತೆ ಎಸ್ಐಟಿ ತನಿಖೆ ನಡೆಯುತ್ತಿರುವಾಗ ಇಡಿ ದಾಳಿ ನಡೆದಿರುವುದಕ್ಕೆ ಕಾಂಗ್ರೆಸ್ ಆಕ್ಷೇಪಿಸಿದೆ.
ಈ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡುತ್ತಾ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂವಡಿ.ಕೆ.ಶಿವಕುಮಾರ್, ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ದಾಳಿ ನಡೆಸಿರುವ ತಮ್ನದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು, “ಈ ಪ್ರಕರಣದಲ್ಲಿ ವಂಚನೆ ನಡೆದಿರುವುದು ಸತ್ಯ. ಈ ಪ್ರಕರಣದ ಸತ್ಯಾಸತ್ಯತೆ ನಮಗೆ ಗೊತ್ತಿದೆ. ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುತ್ತಿದ್ದು, ಅಕ್ರಮವಾಗಿ ವರ್ಗಾವಣೆಯಾಗಿದ್ದ ಹಣವನ್ನು ಈಗಾಗಲೇ ವಶಪಡಿಸಿಕೊಳ್ಳುತ್ತಿದೆ. ನಿರ್ದಿಷ್ಟ ಮೊತ್ತಕ್ಕಿಂತ ಹೆಚ್ಚಿನ ಪ್ರಮಾಣದ ಅವ್ಯವಹಾರವಾದರೆ ಸಿಬಿಐ ತನಿಖೆ ಮಾಡುವ ಅಧಿಕಾರವಿದೆ. ಈ ಎಲ್ಲಾ ತನಿಖೆ ಮುಕ್ತಾಯದ ನಂತರ ಈ ತನಿಖೆಗೆ ಸರಿಯಾಗಿ ನಡೆದಿದೆಯೇ ಎಂದು ಇ.ಡಿ ಪರಾಮರ್ಶನೆ ಮಾಡಬಹುದಿತ್ತು. ಆದರೆ ಇ.ಡಿ ಯವರು ಯಾವುದೇ ದೂರು ಇಲ್ಲದಿದ್ದ ಕಾರಣ, ದಾಳಿ ಮಾಡುವ ಅಗತ್ಯವಿರಲಿಲ್ಲ ಎಂದರು.
ಇ.ಡಿ ಯವರು ಯಾವ ರೀತಿ ತನಿಖೆ ಮಾಡುತ್ತಿದ್ದಾರೆ, ಯಾವ ಪ್ರಕ್ರಿಯೆ ಮೇಲೆ ಮಾಡುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ಎಸ್ಐಟಿ ತನಿಖೆ ಮುಕ್ತವಾಗಿ ನಡೆಯುತ್ತಿದ್ದು, ತನಿಖೆಗೆ ಅಡಚಣೆಯಾಗಬಾರದು ಎಂಬ ಉದ್ದೇಶಕ್ಕೆ ಮಂತ್ರಿಗಳು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ. ನಾವು ಕೂಡ ಕ್ರಾಸ್ ಚೆಕ್ ಮಾಡಿದ್ದು, ಸಚಿವರು ಯಾವುದೇ ಸಹಿ ಮಾಡಿಲ್ಲ. ಅವರ ಹಸ್ತಕ್ಷೇಪವಿಲ್ಲ. ಕಾನೂನು ಪ್ರಕಾರ ತನಿಖೆ ನಡೆಯುತ್ತಿದ್ದು, ಈ ಮಧ್ಯೆ ಇ.ಡಿ ದಾಳಿ ಮಾಡಿದೆ. ನೋಡೋಣ ಏನು ಮಾಡುತ್ತಾರೆ” ಎಂದರು..