ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ರೂಪಾಯಿ ಅಕ್ರಮದಲ್ಲಿ ಬಂಧಿತ ಮಾಜಿ ಸಚಿವ ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು 6 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ.
ಹೆಚ್ಚಿನ ವಿಚಾರಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ತಮ್ಮ ಕಸ್ಟಡಿಗೆ ನೀಡುವಂತೆ ಇ.ಡಿ.ಅಧಿಕಾರಿಗಳು ಮಾಡಿದ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.
ಎರಡು ದಿನಗಳ ಕಾಲ ವಿವಿಧೆಡೆ ಶಂಕಿತರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ಕೈಗೊಂಡಿದ್ದ ಇ.ಡಿ.ತಂಡ ಶುಕ್ರವಾರ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ವಂಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿತ್ತು. ಬಳಿಕ ಬಂಧನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ತನಿಖಾಧಿಕಾರಿಗಳು ನಾಗೇಂದ್ರ ಅವರನ್ನು ಇಂದು ಬೆಳಿಗ್ಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಕೋರಿದರು. ಇ.ಡಿ.ಕೋರಿಕೆಯಂತೆ ನಾಗೇಂದ್ರ ಅವರನ್ನು 6 ದಿನಗಳ ಕಾಲ ತನಿಖಾಧಿಕಾರಿ ವಶಕ್ಕ ನೀಡಿದ ನ್ಯಾಯಾಧೀಶರು, ಜುಲೈ 18 ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶಿಸಿದ್ದಾರೆ.