ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ ಹಿನ್ನೆಲೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.
ಸಚಿವ ನಾಗೇಂದ್ರ ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟುಹಿಡಿದಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ಮಧ್ಯಾಹ್ನ ಭೇಟಿಯಾದ ನಾಗೇಂದ್ರ ಅವರು ರಾಜೀನಾಮೆ ಸಲ್ಲಿಸಿದ್ದಾರೆ.