ಬೆಂಗಳೂರು; ಮಹರ್ಷಿ ವಾಲ್ಮೀಕಿ ನಿಗಮ ಹಗರಣದಲ್ಲಿ ಸಚಿವ ನಾಗೇಂದ್ರ ತಲೆದಂಡವಾಗಿರುವ ಬೆನ್ನಲ್ಲೇ ಇದೀಗ ಮತ್ತೊಬ್ಬ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರತ್ತ ಬಿಜೆಪಿ ಬೊಟ್ಟು ಮಾಡಿದೆ. ಸಚಿವರ ಪಾತ್ರದ ಬಗ್ಗೆ ಪ್ರತಿಪಕ್ಷ ಅನುಮಾನ ವ್ಯಕ್ತಪಡಿಸಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಯಾಗಿ ಕಾಂಗ್ರೆಸ್ಸಿನ ಬಹುತೇಕ ನಾಯಕರು ಸೇರಿಕೊಂಡು ಮಾಡಿರುವ ಮಹಾನ್ ಭ್ರಷ್ಟಾಚಾರ ಎಂದು ಆರೋಪಿಸಿದೆ.
ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರ @INCKarnataka ಸರ್ಕಾರದ ಮುಖ್ಯಮಂತ್ರಿ @siddaramaiah ಆದಿಯಾಗಿ ಕಾಂಗ್ರೆಸ್ಸಿನ ಬಹುತೇಕ ನಾಯಕರು ಸೇರಿಕೊಂಡು ಮಾಡಿರುವ ಮಹಾನ್ ಭ್ರಷ್ಟಾಚಾರ.
ಈ ಪ್ರಕರಣದ 8 ನೇ ಆರೋಪಿ, ಎಸ್ಐಟಿ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲವೆಂದು,
1. ತನ್ನ ಮೊಬೈಲ್‌ನಲ್ಲಿ ನಿಗಮದ ಅಧ್ಯಕ್ಷರಾದ ಬಸವರಾಜ್… pic.twitter.com/xcePyiEACh— BJP Karnataka (@BJP4Karnataka) June 8, 2024
ಈ ಪ್ರಕರಣದ 8 ನೇ ಆರೋಪಿ, ಎಸ್ಐಟಿ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲವೆಂದು, ತನ್ನ ಮೊಬೈಲ್‌ನಲ್ಲಿ ನಿಗಮದ ಅಧ್ಯಕ್ಷರಾದ ಬಸವರಾಜ್ ದದ್ದಲ್ ಜೊತೆ ನಡೆಸಿರುವ ಸಂಭಾಷಣೆಯನ್ನು SIT ವಶಪಡಿಸಿಕೊಂಡಿದ್ದು ಅದನ್ನು ನಾಶ ಮಾಡುವ ಸಂಭವವಿರುತ್ತದೆ. ಹಾಗಾಗಿ ಅದರ ಒಂದು ಪ್ರತಿಯನ್ನು ಕೋರ್ಟ್ ಪಡೆದುಕೊಳ್ಳಬೇಕು. ಸಚಿವರಾದ ಶರಣ ಪ್ರಕಾಶ್ ಪಾಟೀಲ್ ಅವರ ಕಾರ್ಯಾಲಯದ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಯೂನಿಯನ್ ಬ್ಯಾಂಕಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ನಾಶ ಮಾಡುವ ಸಂಭವವಿದ್ದು ಅವುಗಳನ್ನು ಕೂಡ ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ಕೋರ್ಟಿನಲ್ಲಿ ಮನವಿ ಮಾಡಿರುತ್ತಾರೆ ಎಂದು ಬಿಜೆಪಿ ಗಮನಸೆಳೆದಿದೆ.
ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಭಾಗಿಯಾಗಿರುವ ಈ ಒಂದು ಹಗರಣವನ್ನು ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸುವುದು ಅಸಾಧ್ಯ, ಆದಕಾರಣ ಸಿದ್ದರಾಮಯ್ಯನವರು ಈ ಪ್ರಕರಣವನ್ನು ಸಿಬಿಐಗೆ ವಹಿಸಿ ತಾವು ಕೂಡ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಬಿಜೆಪಿ ಆಗ್ರಹಿಸುತ್ತದೆ ಎಂದು ಬಿಜೆಪಿ ಆಗ್ರಹಿಸಿದೆ.





















































