ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸೇರಿದಂತೆ ವಿವಿಧ ಐದು ಅರ್ಜಿಗಳ ಕುರಿತಂತೆ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ಇಂದು ಆದೇಶ ಪ್ರಕಟಿಸಿದೆ.
ಡಿಸೆಂಬರ್ 8ರಂದು ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರಿದ್ದ ಅಲಹಾಬಾದ್ ಹೈಕೋರ್ಟ್ ಪೀಠವು ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಮತ್ತು ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯ ಹಾಗೂ ದೇವಸ್ಥಾನ ಆಡಳಿತ ಮಂಡಳಿಯ ವಾದವನ್ನು ಆಲಿಸಿದ ನಂತರ ತೀರ್ಪನ್ನು ಕಾಯ್ದಿರಿಸಿತ್ತು.
ಮುಸ್ಲಿಂ ಸಂಸ್ಥೆಗಳ ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿತು. ಜೊತೆಗೆ ವಾರಣಾಸಿ ನ್ಯಾಯಾಲಯವು 6 ತಿಂಗಳಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸಬೇಕೆಂದು ನಿರ್ದೇಶನ ನೀಡಿತು.
























































