ಮಂಗಳೂರು: ವರಣಾದಲ್ಲಿ ಸಿದ್ದರಾಮಯ್ಯ ಸೋಲು ಖಚಿತ. ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಪರಾಜಯ ಖಂಡಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ಲೇಷಿಸಿದ್ದಾರೆ
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್. ಅಂತಹ ಕಾಂಗ್ರೆಸ್ಸನ್ನು ರಾಜ್ಯದ ಜನತೆ ತಿರಸ್ಕರಿಸುತ್ತಾರೆ. ವರಣಾದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲು ಖಚಿತ. ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಸೋಲುವುದು ಖಚಿತ. ಹಾಗಿದ್ದರೂ ಮುಖ್ಯಮಂತ್ರಿ ಹುದ್ದೆಗಾಗಿ ಕಾಂಗ್ರೆಸ್‍ನಲ್ಲಿ ಒಳ ಜಗಳ ನಡೆದಿದೆ. ಯಾರನ್ನು ಯಾರು ಸೋಲಿಸುವುದು ಅಂತ ಅವರವರೇ ಕಾಯುತ್ತಿದ್ದಾರೆ. ಕಳೆದ ಬಾರಿ ಜಿ. ಪರಮೇಶ್ವರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ಗುಂಪುಗಳೇ ಈ ಬಾರಿಯೂ ಕಾರ್ಯ ಪ್ರವೃತ್ತವಾಗಿವೆ ಎಂದು ನಳಿನ್‍ಕುಮಾರ್ ಕಟೀಲ್ ಹೇಳಿದರು.
ಮೀಸಲಾತಿ ಕುರಿತು ಹಲವು ವರ್ಷಗಳಿಂದ ಇದ್ದ ಬೇಡಿಕೆಯನ್ನು ಬಿಜೆಪಿ ಈಡೇರಿಸಿದೆ.
ಸಾಮಾಜಿಕ ನ್ಯಾಯ, ಮೂಲಭೂತ ಸೌಕರ್ಯ, ಜನಪರ ಕಲ್ಯಾಣ ಯೋಜನೆಗಳನ್ನು ಡಬಲ್ ಎಂಜಿನ್ ಸರ್ಕಾರ ನೀಡಿರುವುದರಿಂದ ಎಲ್ಲಾ ಸಮುದಾಯಗಳು ಬಿಜೆಪಿ ಜೊತೆಗಿದೆ.
– ಶ್ರೀ @nalinkateel, ರಾಜ್ಯಾಧ್ಯಕ್ಷರು#PoornaBahumata4BJP #BJPYeBharavase pic.twitter.com/qAEvONgkam
— BJP Karnataka (@BJP4Karnataka) May 8, 2023
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಬಜರಂಗ ದಳ ನಿಷೇಧ, ದ್ವೇಷದ ರಾಜಕಾರಣ, ಸುಳ್ಳು ಭರವಸೆ, ಗ್ಯಾರಂಟಿ ಕಾರ್ಡ್‍ಗಳು- ಇವೆಲ್ಲ ಕಾಂಗ್ರೆಸ್ ಭವಿಷ್ಯ ಏನು ಎಂಬುದನ್ನು ಈಗಾಗಲೇ ಜನತೆ ತೋರಿಸಿಕೊಟ್ಟಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳು ರಾಜಸ್ಥಾನ, ಹಿಮಾಚಲದಲ್ಲಿ ಯಾಕೆ ಜಾರಿಯಾಗಿಲ್ಲ? 60 ವರ್ಷಗಳ ಸುದೀರ್ಘ ಆಡಳಿತದಲ್ಲಿ ಕಾಂಗ್ರೆಸ್‍ನವರು ಕೊಡಲಾಗದ ಗ್ಯಾರಂಟಿಗಳನ್ನು ಈಗ ಕೊಡುತ್ತೇವೆ ಅಂತ ಸುಳ್ಳು ಹೇಳ್ತೀರಲ್ಲ ಎಂದು ಕಾಂಗ್ರೆಸ್ ಮುಖಂಡರನ್ನು ನಳಿನ್ ತರಾಟೆಗೆ ತೆಗೆದುಕೊಂಡರು.
ಚುನಾವಣೆ ಪ್ರಚಾರದ ವೇಳೆ ಹೋದ ಕಡೆಗಳೆಲ್ಲಾ ಬಿಜೆಪಿಗೆ ಅಭೂತಪೂರ್ವ ಜನಬೆಂಬಲ ಸಿಗುತ್ತಿದೆ. ಡಬಲ್ ಎಂಜಿನ್ ಸರಕಾರದ ಸಾಧನೆಗಳು ಇವತ್ತು ಜನಸಾಮಾನ್ಯರಿಗೆ ತಲುಪಿವೆ. ಪ್ರಧಾನಿ ಮೋದಿ ಅವರ ಆಡಳಿತದ ಶೈಲಿ, ಅಭಿವೃದ್ಧಿ ಕಾರ್ಯಗಳು, ನಮ್ಮ ಮುಖ್ಯಮಂತ್ರಿಗಳ ಕಾರ್ಯಗಳು, ಡಬಲ್ ಎಂಜಿನ್ ಸರಕಾರ ಅನುಷ್ಠಾನ ಮಾಡಿದ ಸಮಾಜ ಕಲ್ಯಾಣ ಯೋಜನೆಗಳು ಪ್ರತಿ ಮನೆಮನೆಗೆ ತಲುಪಿವೆ. ಅಭೂತಪೂರ್ವ ಅಭಿವೃದ್ಧಿ ಕಾರ್ಯ, ಮೂಲಸೌಕರ್ಯ ನಿರ್ಮಾಣದ ಲಾಭಗಳು ಜನಮಾನಸಕ್ಕೆ ತಲುಪಿವೆ ಎಂದು ಅವರು ನುಡಿದರು.